ಬಳ್ಳಾರಿ : ಯಡಿಯೂರಪ್ಪ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕರು. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯಬಾರದು. ಅವರು ಸಿಎಂ ಆಗಿ ಮುಂದುವರೆದ್ರೆ ಅದು ಕಾಂಗ್ರೆಸ್ ಪಕ್ಷಕ್ಕೂ ಅನುಕೂಲ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಹೇಳಿದರು.
ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ಎರಡು ವರ್ಷದಲ್ಲಿ ಹಗರಿಬೊಮ್ಮನಹಳ್ಳಿ ಕೇತ್ರಕ್ಕೆ 10 ಕೋಟಿ ರೂ. ಬಂದಿದೆ.
ಸರಕಾರದಲ್ಲಿ ಅನುದಾನದಲ್ಲಿ ಸಾಕಷ್ಟು ತಾರತಮ್ಯ ಮಾಡಲಾಗುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಸರಕಾರ ರಚನೆಯಾದ ಸಂದರ್ಭದಲ್ಲಿ 167 ಭರವಸೆಗಳನ್ನು ಈಡೇರಿಸಿದರು ಎಂದರು.
ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಂದು ಕೊರೊನಾದಿಂದ ಮೃತಪಟ್ಟವರ ಡೆತ್ ಸರ್ಟಿಫಿಕೇಟ್ ಸಿಗುತ್ತಿಲ್ಲ. ಕೊರೊನಾ ಸಮಯದಲ್ಲಿ ಸಾಕಷ್ಟು ಪರಿಹಾರ ಘೋಷಣೆ ಮಾಡಿದ್ದಾರೆ.
ಆದ್ರೆ, ಅದು ಯಾರಿಗೆ ತಲುಪಿದೆ?. ಕಾಂಗ್ರೆಸ್ ಪಕ್ಷದ ಶಾಸಕರು ಇರೋ ಕ್ಷೇತ್ರಗಳಿಗೆ ಅನುದಾನ ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗ ಎಲ್ಲರಿಗೂ ಅನುಕೂಲವಾಗಿತ್ತು ಎಂದರು.
ಇದನ್ನೂ ಓದಿ : ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಕೋಡಿಶ್ರೀ ನುಡಿದ್ರು ಮಹತ್ವದ ಭವಿಷ್ಯ