ಹೊಸಪೇಟೆ: ತಾಲೂಕಿನ ಕಮಲಾಪುರ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅಧ್ಯಕ್ಷರಾಗಿ ಕಾಂಗ್ರೆಸ್ ಸದಸ್ಯ ಸಯ್ಯದ್ ಅಮಾನುಲ್ಲಾ ಹಾಗೂ ಉಪಾಧ್ಯಕ್ಷರಾಗಿ ಬೋರಮ್ಮ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
ಇಬ್ಬರು ಮಾತ್ರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ ಇಬ್ಬರ ನಾಮಪತ್ರ ಕ್ರಮಬದ್ಧವಾಗಿದ್ದು, ಅವಿರೋಧ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿ ಎಚ್. ವಿಶ್ವನಾಥ ತಿಳಿಸಿದರು.
ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಾಗಿತ್ತು. ಒಟ್ಟು 20 ಸದಸ್ಯ ಬಲದ ಪಟ್ಟಣ ಪಂಚಾಯತ್ನಲ್ಲಿ ಕಾಂಗ್ರೆಸ್ 14, ಪಕ್ಷೇತರರು 5 ಮತ್ತು ಬಿಜೆಪಿಯಿಂದ ಒಬ್ಬರು ಜಯ ಸಾಧಿಸಿದ್ದರು.