ETV Bharat / state

ಕಲುಷಿತ ನೀರು ಸೇವನೆ ಪ್ರಕರಣ: ಮಕರಬ್ಬಿ ಗ್ರಾಮದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆ - ಮಕರಬ್ಬಿ ಗ್ರಾಮ

ವಿಜಯನಗರದ ಕಲುಷಿತ ನೀರು ಸೇವನೆ ಪ್ರಕರಣ ಸಂಬಂಧ ಇದೀಗ ಮಕರಬ್ಬಿ ಗ್ರಾಮದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಕಲುಷಿತ ನೀರು ಸೇವನೆ ಪ್ರಕರಣ
ಕಲುಷಿತ ನೀರು ಸೇವನೆ ಪ್ರಕರಣ
author img

By

Published : Oct 11, 2021, 1:29 PM IST

ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಇದೀಗ ಏಳಕ್ಕೆ ಏರಿಕೆಯಾಗಿದ್ದು, ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆ

ಸೆ.23 ರಂದು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ ನಾಗಮ್ಮ ದೊಡ್ಡಬಾರಿಕೇರ (72) ಇಂದು ಮೃತಪಟ್ಟಿದ್ದಾರೆ. ಅಸ್ವಸ್ಥರಾಗಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಕಳೆದೆರಡು ದಿನಗಳಿಂದ ಮತ್ತೆ ಅನಾರೋಗ್ಯಕ್ಕೀಡಾಗಿ, ಮಕರಬ್ಬಿಯ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ಕೊಂಡೊಯ್ಯುವಾಗ ಕಾಂತೆಬೆನ್ನೂರು ಬಳಿ ಮೃತಪಟ್ಟಿದ್ದಾರೆ.

ನಾಗಮ್ಮ ದೊಡ್ಡಬಾರಿಕೇರ
ಮೃತಪಟ್ಟ ನಾಗಮ್ಮ ದೊಡ್ಡಬಾರಿಕೇರ

ಇದನ್ನೂ ಓದಿ: ಕಲುಷಿತ ನೀರು ಕುಡಿದ ಪ್ರಕರಣ : ಎಇಇ ಎಂ ಡಿ ಕುಮಾರ್ ತಲೆದಂಡ

ಈ ಮೊದಲೇ ಕಲುಷಿತ ನೀರು ಸೇವಿಸಿ ಗ್ರಾಮದ ಆರು ಮಂದಿ ಸಾವನ್ನಪ್ಪಿದ್ದು, ಅನೇಕರು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಕರ್ತವ್ಯಲೋಪದಡಿ ಹೂವಿನಹಡಗಲಿಯ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ ಡಿ ಕುಮಾರ್​ ಅವರನ್ನು ಅಮಾನತುಗೊಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.