ಬಳ್ಳಾರಿ: ಮಹಾಮಾರಿ ಕೋವಿಡ್ ಸಂಕಷ್ಟದಲ್ಲಿ ನಾವಿದ್ದೇವೆ. ಸೂಕ್ತ ಮಾರ್ಗೋಪಾಯ ಕಂಡುಕೊಳ್ಳೋ ಬದಲಿಗೆ ಈ ರಾಜಕೀಯ ಮೇಲಾಟ ಸರಿಯಲ್ಲ. ಅಧಿಕಾರ ಮತ್ತು ಕುರ್ಚಿಗಾಗಿ ಕಿತ್ತಾಟ ನಡೆಸೋದು ಸದ್ಯದ ಪರಿಸ್ಥಿತಿಯಲ್ಲಿ ಸಲ್ಲದು ಎಂದು ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ಮಿಲ್ಲರ್ ಪೇಟೆಯಲ್ಲಿರುವ ಕಲ್ಯಾಣ ಸ್ವಾಮಿ ಮಠದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂಕಷ್ಟದಲ್ಲಿ ರಾಜ್ಯದ ಜನರಿದ್ದಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕೂಗು ಎದ್ದಿರೋದು ಸರಿಯಲ್ಲ ಎಂದರು.
ನಾಯಕತ್ವ ಬದಲಾವಣೆಗೆ ಇದು ಸೂಕ್ತ ಸಮಯವಲ್ಲ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತಮ್ಮ ಇಳಿ ವಯಸ್ಸಿನಲ್ಲೂ ಕೂಡ ಕೋವಿಡ್ ನಿಯಂತ್ರಣ ಮಾಡೋದಕ್ಕೆ ಅವಿರತವಾಗಿ ಶ್ರಮಿಸಿದ್ದಾರೆ. ಕೊರೊನಾ ನಿಯಂತ್ರಣದಲ್ಲಿ ಅನ್ಯ ರಾಜ್ಯಗಳಿಗಿಂತಲೂ ಕರ್ನಾಟಕ ಮಾದರಿಯಾಗಿದೆ ಎಂದು ತಿಳಿಸಿದರು.
ಓದಿ: ರಾಜ್ಯದಲ್ಲಿ ಇನ್ನೂ 2 ದಿನ ಭಾರಿ ಮಳೆ: ಇಂದು, ನಾಳೆಗೆ ಆರೆಂಜ್ ಅಲರ್ಟ್