ETV Bharat / state

ಅಸಂಘಟಿತ ಕಾರ್ಮಿಕರಿಗೆ ಕೊರೊನಾ ಜಾಗೃತಿ... ಅಪರ ಜಿಲ್ಲಾಧಿಕಾರಿಗಳಿಂದ ಭಿತ್ತಿಪತ್ರ ಬಿಡುಗಡೆ

ವೈರಸ್ ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಬೇಕು. ಜನಸಂದಣಿಯ ಪ್ರದೇಶದಿಂದ ದೂರವಿರಬೇಕು. ಶೀತ, ಕೆಮ್ಮು ಅಥವಾ ಫ್ಲೊನಂತಹ ಗುಣ ಲಕ್ಷಣಗಳಲಿರುವರೊಂದಿಗೆ 1 ಮೀಟರ್‌ನಷ್ಟು ಅಂತರವಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದ್ದಾರೆ.

poster-release-from-district-collector-in-bellary
ಅಪರ ಜಿಲ್ಲಾಧಿಕಾರಿಗಳಿಂದ ಭಿತ್ತಿಪತ್ರ ಬಿಡುಗಡೆ
author img

By

Published : Mar 22, 2020, 3:57 AM IST

ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ, ಬೆಂಗಳೂರಿನ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ದಪಡಿಸಲಾದ ಭಿತ್ತಿಪತ್ರಗಳು ಹಾಗೂ ಕರಪತ್ರಗಳನ್ನು ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ಶನಿವಾರ ಬಿಡುಗಡೆಗೊಳಿಸಿದರು.

ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಿಡುಗಡೆ ಮಾಡಿದ ಅವರು, ಅಸಂಘಟಿತ ಕಾರ್ಮಿಕರಿಗಾಗಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಕಾರ್ಮಿಕ ಇಲಾಖೆ ಮುಂದಾಗಿರುವುದು ಶ್ಲಾಘನೀಯ ಎಂದರು.

ಜಿಲ್ಲೆಯಲ್ಲಿ ವೈರಸ್ ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜನಸಂದಣಿಯ ಪ್ರದೇಶದಿಂದ ದೂರವಿರಬೇಕು, ಶೀತ, ಕೆಮ್ಮು ಅಥವಾ ಫ್ಲೊನಂತಹ ಗುಣಲಕ್ಷಣಗಳಲಿರುವರೊಂದಿಗೆ 1 ಮೀಟರ್‌ನಷ್ಟು ಅಂತರವಿರಬೇಕು, ಸೀನುವಾಗ ಮೂಗು ಮತ್ತು ಬಾಯಿಯನ್ನು ಕರವಸ್ತ್ರ, ಟಿಶ್ಯೂವಿನಿಂದ ಮುಚ್ಚಿಕೊಳ್ಳಬೇಕು, ಸೋಪು ಹಚ್ಚಿ ಆಗಾಗ ಕೈತೊಳೆದುಕೊಳ್ಳಬೇಕು ಅಥವಾ ಸ್ಯಾನಿಟೈಸರ್ ಬಳಸಿ ಕೈ ಸ್ವಚ್ಛ ಮಾಡಿಕೊಳ್ಳಬೇಕು, ರೋಗದ ಲಕ್ಷಣಗಳು ಕಾಣಿಸಿಕೊಂಡಲ್ಲಿ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದರು.

ಐಸಿಯು, ವೆಂಟಿಲೇಟರ್‌ಗಳ ಕುರಿತು ಮಾಹಿತಿ ನೀಡಿ : ಜಿಲ್ಲಾಧಿಕಾರಿ ಎಸ್. ಎಸ್. ನಕುಲ್

ಆಸ್ಪತ್ರೆಗಳಿಗೆ ತಪಾಸಣೆಗೆ ಬರುವ ರೋಗಿಗಳಲ್ಲಿ ಕೊರೊನಾ ವೈರಸ್‌ನ ಲಕ್ಷಣಗಳು ಕಂಡುಬಂದಲ್ಲಿ ಜಿಲ್ಲಾಡಳಿತಕ್ಕೆ ಸೂಚಿಸಿ ಅದರಂತೆ ತಮ್ಮಲ್ಲಿ ಐಸಿಯು ಅಥವಾ ವೆಂಟಿಲೇಟರ್ ವ್ಯವಸ್ಥೆಯ ಸಹಕಾರದ ಅವಶ್ಯವಿರುತ್ತದೆ. ತುರ್ತು ಸಂದರ್ಭದಲ್ಲಿ ಈ ವ್ಯವಸ್ಥೆಯ ಬಳಕೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಜಿಲ್ಲೆಯ ಖಾಸಗಿ ವೈದ್ಯರಿಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಐಎಂಎ ಹಾಗೂ ಖಾಸಗಿ ವೈದ್ಯರೊಂದಿಗೆ ಕೊರೊನಾ ವೈರಸ್ ಜಾಗೃತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಭೆಯಲ್ಲಿ ಕೊರೊನಾ ವೈರಸ್ ಕುರಿತಾದ ಮಾಹಿತಿಯನ್ನು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಾದ ವರದಿ ನೀಡಿದ ನಂತರ ಮಾತನಾಡಿದ ಅವರು, ಈಗಾಗಲೇ ಕೆಲ ತುರ್ತು ಸೇವೆಗಳನ್ನು ಹೊರತು ಪಡಿಸಿ ಮಾ.31 ಮಧ್ಯರಾತ್ರಿವರೆಗೂ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ. ಅದೇ ರೀತಿಯಾಗಿ ಜಿಲ್ಲಾಡಳಿತ, ವಿಮ್ಸ್ ಹಾಗೂ ಆರೋಗ್ಯ ಇಲಾಖೆಗಳು ಕ್ರಮಗಳನ್ನು ಕೈಗೊಂಡಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.