ಹೊಸಪೇಟೆ: ಕೋವಿಡ್ ಲಸಿಕೆ ಪಡೆಯುವುದರಿಂದ ರಿಯಾಕ್ಷನ್ ಆಗುವುದಿಲ್ಲ. ಇದಕ್ಕೆ ಯಾರೂ ಕೂಡ ಕಿವಿಕೊಡಬಾರದು. ವ್ಯಾಕ್ಸಿನ್ ಹಾಕಿಸಿಕೊಳ್ಳವ ಮೂಲಕ ಕೋವಿಡ್ ಮುಕ್ತರಾಗಬೇಕು ಎಂದು ಸಚಿವ ಆನಂದ್ ಸಿಂಗ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಚ್ಚಾಗುತ್ತಿದೆ. ಆದರೆ, ಜನರು ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ. ಸಾರ್ವಜನಿಕರು ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಕೊರೊನಾ ಮುಕ್ತರಾಗುವವರೆಗೂ ಜನರು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಜಿಲ್ಲಾಡಳಿತ ಗುಂಪು ಕಾರ್ಯಕ್ರಮಗಳಿಗೆ ಅನುಮತಿ ನೀಡುತ್ತಿಲ್ಲ. ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಜನರ ಸಹಭಾಗಿತ್ವ ಕೂಡ ಅಗತ್ಯ ಎಂದರು.
ಇದನ್ನೂ ಓದಿ: ಮತ್ತೆ ದೇಶದಲ್ಲಿ ಕೋವಿಡ್ ಸಾವು-ನೋವು ಹೆಚ್ಚಳ.. 2.97 ಕೋಟಿ ಜನರಿಗೆ ವ್ಯಾಕ್ಸಿನ್
ಹೊಸಪೇಟೆಗೆ ಬೇರೆ ಬೇರೆ ರಾಜ್ಯಗಳಿಂದ ಜನರು ಆಗಮಿಸುತ್ತಿದ್ದಾರೆ. ಹಾಗಾಗಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ತಾಲೂಕು ಹಾಗೂ ಜಿಲ್ಲಾಡಳಿತ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ, ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.
ದೆಹಲಿ ರೈತರ ಪ್ರತಿಭಟನೆ ಕುರಿತು ಪ್ರಶ್ನೆಗೆ, ಎಲ್ಲಾ ಸರಿ ಹೋಗಲಿದೆ. ಎಲ್ಲಿದೆ ಪ್ರತಿಭಟನೆ? ಕೆಲವರು ಮಾತ್ರ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.