ಬಳ್ಳಾರಿ: ಗಣಿಜಿಲ್ಲೆಯಲ್ಲಿಂದು ಹೊಸದಾಗಿ 135 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 2025ಕ್ಕೆ ಏರಿಕೆಯಾಗಿದೆ.
ಇಂದು ನಾಲ್ವರು ಮೃತಪಟ್ಟಿದ್ದು, ಅಂದಾಜು 65 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 96 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
ಇದುವರೆಗೂ 1120 ಮಂದಿ ಗುಣಮುಖರಾಗಿದ್ದಾರೆ. 54 ಮಂದಿ ಸಾವನ್ನಪ್ಪಿದ್ದಾರೆ. 854 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.