ಬಳ್ಳಾರಿ: ಕೊರೊನಾ ಸೋಂಕಿತ ವ್ಯಕ್ತಿಯೋರ್ವ ಸುಮಾರು ಒಂದು ಕಿಲೋ ಮೀಟರ್ ದೂರವನ್ನು ನಡೆದುಕೊಂಡು ಹೋಗಿ ಕೋವಿಡ್ ಆಸ್ಪತ್ರೆ ತಲುಪಿರುವ ಘಟನೆ ಕೂಡ್ಲಿಗಿ ಪಟ್ಟಣದಲ್ಲಿ ನಡೆದಿದೆ.
ಕೋವಿಡ್ ಟೆಸ್ಟ್ಗೆ ಒಳಗಾಗಿದ್ದ ವ್ಯಕ್ತಿಯ ರಿಪೋರ್ಟ್ ಪಾಸಿಟಿವ್ ಬಂದಿತ್ತು. ಅ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕಿದ್ದ ಕೂಡ್ಲಿಗಿ ಪಟ್ಟಣದ ಆರೋಗ್ಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗ್ತಿದೆ. ಇದರಿಂದ ಬೇಸತ್ತ ವ್ಯಕ್ತಿ ತಾನಿದ್ದ ಸ್ಥಳದಿಂದ ಬ್ಯಾಗ್ ಹಿಡಿದು ಆಸ್ಪತ್ರೆಗೆ ನಡೆದುಕೊಂಡು ಬಂದಿದ್ದಾನೆ.
ಅ್ಯಂಬುಲೆನ್ಸ್ ಬರುತ್ತದೆ ಎಂದು ಕಾದು ಕಾದು ಸುಸ್ತಾಗಿದ್ದೆ. ಅದು ಬಾರದ ಕಾರಣ ನಾನೇ ನಡೆದುಕೊಂಡು ಬಂದು ಆಸ್ಪತ್ರೆ ಸೇರಿದೆ. ಅಂದಾಜು ಒಂದು ಕಿಲೋ ಮೀಟರ್ ದೂರದಿಂದ ನಡೆದುಕೊಂಡು ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ಆರೋಗ್ಯಾಧಿಕಾರಿಗಳ ಈ ಅಮಾನವೀಯ ಘಟನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.