ಬಳ್ಳಾರಿ : ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಇಡೀ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಇದರಿಂದ ಠಾಣೆಯ ವ್ಯಾಪ್ತಿಯ ಜನರು ದೂರು ಸೇರಿ ಠಾಣೆಗೆ ಸಂಬಂಧಿಸಿದಂತೆ ವಿಚಾರಗಳಿಗೆ ಕಾನಾಹೊಸಳ್ಳಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಿಎಸ್‌ಐ ಸೇರಿದಂತೆ 42 ಸಿಬ್ಬಂದಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. ಕೊಟ್ಟೂರು ಪೊಲೀಸ್ ವಸತಿ ಗೃಹಗಳ ಪ್ರದೇಶವನ್ನೂ ಕಂಟೇನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.