ಬಳ್ಳಾರಿ : ಜಿಲ್ಲೆಯಲ್ಲಿ ನವೆಂಬರ್ 1ರಂದು 63 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 37,284ಕ್ಕೆ ಏರಿಕೆಯಾಗಿದೆ.
ಬಳ್ಳಾರಿ 13, ಸಂಡೂರು 4, ಸಿರುಗುಪ್ಪ 5, ಕೂಡ್ಲಿಗಿ 10, ಹಡಗಲಿ 2, ಹೊಸಪೇಟೆ 11, ಹಗರಿಬೊಮ್ಮನಹಳ್ಳಿ 11 ಹಾಗೂ ಹರಪನಹಳ್ಳಿಯ ಏಳು ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ 35,808 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಕೊರೊನಾಗೆ 539 ಮಂದಿ ಬಲಿಯಾಗಿದ್ದಾರೆ.
ಕೊರೊನಾ ವೈರಸ್ ನಿಯಂತ್ರಿಸಲು ನಗರದ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಎಸಿ ಕಚೇರಿಗಳ ಆವರಣದಲ್ಲಿ ಎರಡು ದಿನಗಳಿಗೊಮ್ಮೆ ಸ್ಯಾನಿಟೈಜರ್ ಮಾಡಲಾಗುತ್ತಿದೆ.
ಇನ್ನು, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆಗಳು ಸಾರ್ವಜನಿಕರಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿವೆ. ಯಾರು ಕೊರೊನಾ ನಿಯಮ ಉಲ್ಲಂಘನೆ ಮಾಡುತ್ತಾರೋ ಅಂತಹವರಿಗೆ ದಂಡ ವಿಧಿಸಲಾಗುತ್ತಿದೆ.