ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಮತ್ತೊಂದು ಕೊರೊನಾ ವೈರಸ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 14 ವರ್ಷದ ಬಾಲಕನಲ್ಲಿ ಈ ವೈರಸ್ ಪತ್ತೆಯಾಗಿದೆ.
ಇದು ಜಿಲ್ಲೆಯಲ್ಲಿ ಪತ್ತೆಯಾದ ನಾಲ್ಕನೆಯ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ನಂಜನಗೂಡು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದವರ ಜೊತೆಗಿದ್ದು, ಮೊನ್ನೆ ತಾನೇ ನಂಜನಗೂಡಿನಿಂದ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಾಗಲೂರು - ಹೊಸಳ್ಳಿ ಗ್ರಾಮಕ್ಕೆ ಬಂದಿದ್ರು. ಮೂರು ದಿನಗಳಕಾಲ ಐಸೋಲೇಷನ್ ವಾರ್ಡ್ನಲ್ಲಿ ಇರಿಸಲಾಗಿತ್ತು. ಇದೀಗ ಕೋವಿಡ್-19 ತಗುಲಿರುವುದು ಸೋಂಕು ಧೃಡಪಟ್ಟಿದೆ.
ಈ ಬಾಲಕ ಸಿರುಗುಪ್ಪ ತಾಲೂಕು ಮೂಲದವನಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.