ETV Bharat / state

ಬಳ್ಳಾರಿಯಲ್ಲಿ ಇಂದಿನಿಂದ ಕೋವಿಡ್ ರಿಪೋರ್ಟ್ ನೀಡುವುದಿಲ್ಲ: ಡಾ. ಬಸರೆಡ್ಡಿ

ಜಿಲ್ಲೆಯ ಎಲ್ಲಾ ಸರ್ಕಾರಿ ವೈದ್ಯರಿಂದ ಕೋವಿಡ್​​ ರಿಪೋರ್ಟ್ ನೀಡದಿರಲು ನಿರ್ಧಾರ ಮಾಡಲಾಗಿದೆ ಎಂದು ಬಳ್ಳಾರಿಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎನ್. ಬಸರೆಡ್ಡಿ ತಿಳಿಸಿದ್ದಾರೆ.

Dr. Basareddy
ಡಾ. ಬಸರೆಡ್ಡಿ
author img

By

Published : Sep 15, 2020, 2:55 PM IST

ಬಳ್ಳಾರಿ: ಕಳೆದ ಆರು ತಿಂಗಳಿಂದ ಮನವಿ ಮಾಡಿದರೂ ಕೂಡ ನಮ್ಮ ಅಗತ್ಯ ಬೇಡಿಕೆಗಳನ್ನು ಸರ್ಕಾರ ಪೂರೈಸಿಲ್ಲ. ಹೀಗಾಗಿ ಇಂದಿನಿಂದ ಜಿಲ್ಲೆಯಲ್ಲಿ ಕೊವೀಡ್ ರಿಪೋರ್ಟ್ ನೀಡುವುದಿಲ್ಲ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎನ್. ಬಸರೆಡ್ಡಿ ತಿಳಿಸಿದರು.

ಡಾ. ಬಸರೆಡ್ಡಿ

ನಗರದಲ್ಲಿಂದು ಜಿಲ್ಲಾದಿಕಾರಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯ ಸರ್ಕಾರಿ ವೈದ್ಯರಿಂದ ಕೋವಿಡ್​​ ರಿಪೋರ್ಟ್ ನೀಡದಿರಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ನೀತಿಯಂತೆ ಕರ್ನಾಟಕ ರಾಜ್ಯದಲ್ಲೂ ವೈದ್ಯಕೀಯ ಶಿಕ್ಷಣ ಇಲಾಖೆ ನೀಡುವಂತೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗೆ ವೇತನ ನೀಡುವಂತೆ ಆಗ್ರಹಿಸಿದರು.

ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಇತರೆ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ವೇತನವನ್ನು ನೀಡಬೇಕು ಎಂದು ಒತ್ತಾಯಿಸಿದ ಅವರು, ದೇಶದ ಎಲ್ಲಾ ರಾಜ್ಯಗಳಲ್ಲಿ ಸಮಾನ ವೇತನ ಕಾನೂನು ಜಾರಿ ಇದೆ. ಆದ್ರೆ ರಾಜ್ಯದಲ್ಲಿ ಮಾತ್ರ ಜಾರಿ ಮಾಡಿಲ್ಲ. ಕೋವಿಡ್ ಸಮಯದಲ್ಲಿ ಜೀವವನ್ನು ಲೆಕ್ಕಿಸದೆ ಕೆಲಸ ಮಾಡಿದ್ದೇವೆ. ಹೀಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಈ ವೇಳೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.