ETV Bharat / state

ಬಳ್ಳಾರಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ : ಮೂವರ ಬಂಧನ, 7 ಲಕ್ಷ ವಶ - Cricket betting Bellary

ನಗರದ ಅಪಾರ್ಟ್ ಮೆಂಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Accused
Accused
author img

By

Published : Oct 26, 2020, 2:26 PM IST

ಬಳ್ಳಾರಿ : ಅಪಾರ್ಟ್ ಮೆಂಟ್ ವೊಂದರ ಮನೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್. ರಮೇಶ್, ಅಲಾಂ ಭಾಷಾ ಮತ್ತು ಬಾಲಾಜಿ ಬಂಧಿತ ಆರೋಪಿಗಳು.‌ ಇವರು ನಗರದ ಸಿದ್ದಾರ್ಥ ಕಾಲೋನಿಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದರು.

ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 7 ಲಕ್ಷ ನಗದು ಹಾಗೂ ಮೂರು ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಎಸ್ಪಿ ಬಳ್ಳಾರಿ ನಗರ ಉಪ-ವಿಭಾಗ ರಮೇಶ್ ಕುಮಾರ್, ಸಿಇಎನ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಜಿ.ಆರ್.ಷಣ್ಮುಖಪ್ಪ ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.