ETV Bharat / state

ಕೋವಿಡ್​ ರೋಗಿಗಳಿಗೆ ಬೆಡ್​ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಸಚಿವ ಶ್ರೀರಾಮುಲು - ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಕೋವಿಡ್ ಸೋಂಕಿತರಿಗೆ ಬೆಡ್​ಗಳನ್ನು ಮೀಸಲಿಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

Minister Sriramulu
ಆರೋಗ್ಯ ಸಚಿವ ಶ್ರೀರಾಮುಲು
author img

By

Published : Jul 16, 2020, 2:48 PM IST

ಬಳ್ಳಾರಿ: ರಾಜ್ಯದ ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಅಂದಾಜು 50 ಬೆಡ್​ಗಳನ್ನ ಮೀಸಲಿಡಲು ಸೂಚನೆ ನೀಡಲಾಗಿತ್ತು. ಆದರೆ, ಕೆಲ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಕೋವಿಡ್​ ರೋಗಿಗಳ ಚಿಕಿತ್ಸೆಗೆ ಸಹಕಾರ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್​ ಕೇಸ್​- ಸಚಿವ ಶ್ರೀರಾಮುಲು

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಒಡಂಬಡಿಕೆಯ ಪ್ರಕಾರ ಖಾಸಗಿ ಆಸ್ಪತ್ರೆಗಳು ಅಂದಾಜು 50 ಬೆಡ್​ಗಳನ್ನ ಕೋವಿಡ್ ಸೋಂಕಿತರಿಗೆ ಮೀಸಲಿರಿಸಬೇಕೆಂಬ ಆದೇಶವಿದೆ. ಹಲವು ಖಾಸಗಿ ಆಸ್ಪತ್ರೆಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿವೆ. ಕೆಲ ಖಾಸಗಿ ಆಸ್ಪತ್ರೆಗಳು ಮಾತ್ರ ರಾಜ್ಯ ಸರ್ಕಾರದ ಒಡಂಬಡಿಕೆಯನ್ನ‌ ಪಾಲಿಸುತ್ತಿಲ್ಲ. ಹೀಗಾಗಿ, ಅಂತಹ ಖಾಸಗಿ ಆಸ್ಪತ್ರೆಗಳನ್ನ ಗುರುತಿಸಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ರವಾನಿಸಿದ್ದಾರೆ.

ಇದಲ್ಲದೇ, ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಅಂದಾಜು 2 ಲಕ್ಷಕ್ಕೂ ಅಧಿಕ ಆ್ಯಂಟಿಜೆನ್ ಕಿಟ್​ಗಳನ್ನ ಖರೀದಿಸಲು ಚಿಂತನೆ ನಡೆಸಿದ್ದು, ಈಗಾಗಲೇ 1 ‌ಲಕ್ಷ ಕಿಟ್​ಗಳನ್ನು ಖರೀದಿಸಲಾಗಿದೆ. ಕೋವಿಡ್ ಟೆಸ್ಟ್ ರಿಪೋರ್ಟ್ ಬರಲು ತಡವಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗೆ ಎರಡ್ಮೂರು ಟೆಸ್ಟಿಂಗ್ ಲ್ಯಾಬ್​ಗಳನ್ನ ಸ್ಥಾಪಿಸಲು ನಿರ್ಧರಿಸಿದ್ದು, ಬಹು ಬೇಗನೆ ರಿಪೋರ್ಟ್ ಬರಲು ಇದು ಸಹಕಾರಿಯಾಗಲಿದೆ ಎಂದರು.

ಹೊರ ರಾಜ್ಯಗಳಿಂದ ಬೆಂಗಳೂರಿಗೆ ಜನ ಬರುವುದರಿಂದ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹೀಗಾಗಿ, ಆಯಾ ಜಿಲ್ಲೆಗಳ ಜನಸಂಖ್ಯೆ ಆಧರಿಸಿ ಕೋವಿಡ್ ಟೆಸ್ಟ್​ಗೆ ಒಳಪಡಿಸಲಾಗುತ್ತದೆ ಸಚಿವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.