ಹೊಸಪೇಟೆ: ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ಹಾಗೂ ರಿಂಗ್ ರೋಡ್ ನಿರ್ಮಾಣಕ್ಕೆ ಡಿಎಂಎಫ್ ಅನುದಾನ ಒದಗಿಸಬೇಕು ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಹೊಸಪೇಟೆಯಲ್ಲಿ ಅರಣ್ಯ ಸಚಿವ ಆನಂದ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಸಚಿವರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣ ಹಾಗೂ ರಿಂಗ್ ರೋಡ್ ನಿರ್ಮಾಣಕ್ಕೆ ಡಿಎಂಎಫ್ ಅನುದಾನ ಒದಗಿಸಬೇಕು. ಇದರಿಂದ ಬಳ್ಳಾರಿ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಇದಕ್ಕೆ ಸಚಿವರು ಸ್ಪಂದಿಸುವ ಭರವಸೆ ಇದೆ ಎಂದು ಹೇಳಿದರು.
ಇದೇ ವೇಳೆ ಸಚಿವ ಆಪ್ತ ಕಾರ್ಯದರ್ಶಿ ಧರ್ಮೇಂದ್ರ ಸಿಂಗ್, ಸಂದೀಪ್ ಸಿಂಗ್ ಇನ್ನಿತರರಿದ್ದರು.