ಬಳ್ಳಾರಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಿನ್ನೆ ಅಧಿಕಾರ ಸ್ವೀಕರಿಸಿರುವ ನಕುಲ್ ಇಂದು ವಿವಿಧ ಇಲಾಖೆಗಳ ಕಚೇರಿಗೆ ಭೇಟಿ ನೀಡಿದರು.
ಆಹಾರ ಮತ್ತು ನಾಗರಿಕ ಸೇವೆಗಳ ಪೂರೈಕೆ ಇಲಾಖೆ, ಬಳ್ಳಾರಿ ನಗರ ತಹಶೀಲ್ದಾರ್ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ, ಜಿಲ್ಲಾ ಸರ್ವೆ ಇಲಾಖೆ, ಜಿಲ್ಲಾ ಖಜಾನೆ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಕಚೇರಿಗೆ ಬೆಳ್ಳಂಬೆಳಗ್ಗೆ ಭೇಟಿ ನೀಡಿ, ಅಧಿಕಾರಿ ಮತ್ತು ಸಿಬ್ಬಂದಿಗೆ ಅಚ್ಚರಿ ಮೂಡಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶಕುಮಾರ ಅವರೊಂದಿಗೆ ತೆರಳಿದ ನೂತನ ಡಿಸಿ ನಕುಲ್, ಕಚೇರಿಯೊಳಗೆ ಪ್ರವೇಶಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಸೇರಿದಂತೆ ಇನ್ನಿತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಿದ್ದಾರೆ.
ಜಿಲ್ಲಾಧಿಕಾರಿ ನಕುಲ್, ಆಯಾ ಇಲಾಖೆಗಳ ಕಚೇರಿಗೆ ಭೇಟಿ ನೀಡಿದ ಹಿನ್ನೆಲೆ ಸಾರ್ವಜನಿಕರನ್ನು ಆಮೇಲೆ ಬರುವಂತೆ ಸೂಚಿಸುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡುಬಂತು.