ಹೊಸಪೇಟೆ: ಆನಂದ ಸಿಂಗ್ 50 ಸಾವಿರ ಮತಗಳ ಅಂತರದಿಂದ ಗೆದ್ದು ಬರ್ತಾರೆ. ಅದಕ್ಕೆ ಇಂದು ಸೇರಿರುವ ಜನತೆಯೇ ಸಾಕ್ಷಿ ಎಂದು ಡಿಸಿಎಂ ಗೋವಿಂದ ಕಾರಜೋಳ ಅಭಿಪ್ರಾಯ ಪಟ್ಟಿದ್ದಾರೆ.
ಉಪಚುನಾವಣೆಗೆ ಆನಂದ್ ಸಿಂಗ್ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಡಿಸಿಎಂಗೋವಿಂದ ಕಾರಜೋಳ, ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ ಪಕ್ಷದ ಸಾಧನೆ ಶೂನ್ಯ. ಆನಂದ ಸಿಂಗ್ ಅವರು ಜನಪರ ನಾಯಕ. ಶಾಸಕರಾಗಿ ಅವರು ಮಾಡಿದ ಕಾರ್ಯಗಳು ಜನರ ಮನಸ್ಸಿನಲ್ಲಿ ಇಂದಿಗೂ ಉಳಿದಿವೆ. ಉಪಚುನಾವಣೆಯಲ್ಲಿ 50 ಸಾವಿರ ಮತಗಳ ಅಂತರದಿಂದ ಗೆದ್ದು ಬರ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು, ಕಾಂಗ್ರೆಸ್ ಪಕ್ಷವು ಅಭಿವೃದ್ಧಿ ಹೆಸರನ್ನು ಹೇಳಿ ಜನರ ದಿಕ್ಕನ್ನು ತಪ್ಪಿಸಿದೆ. ಅವರ ಆಡಳಿತವನ್ನು ಜನರು ಮೆಚ್ಚಿಕೊಂಡಿಲ್ಲ. ಪ್ರಧಾನಮಂತ್ರಿ ಅವರು ಸಾಧನೆಯನ್ನು ಮೆಚ್ವಿಕೊಂಡು ಇವತ್ತು ಪಕ್ಷದಲ್ಲಿ ಯಾರು ನಿಂತರು ಗೆಲುವನ್ನು ಸಾಧಿಸುತ್ತಾರೆ ಎಂದರು.
ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಮತದಾರ ಬಾಂಧವರು ದೂರವಿಟ್ಟಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಏನೂ ಕೆಲಸ ಮಾಡದೆ ಸರ್ಕಾರದ ಹಾಗೂ ಸಾರ್ವಜನಿಕರ ಸಮಯವನ್ನು ಹಾಳು ಮಾಡಿದ್ದಾರೆ. ಅದಕ್ಕಾಗಿ ಜನರು ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದರು.