ಬಳ್ಳಾರಿ: ನಗರದ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿಯಾಗಿದ್ದ ಗೌರಿಹಳ್ಳಿಯ ಹನುಮಂತಪ್ಪ ಹೃದಯ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿದ್ದಾನೆ.
(64) ವರ್ಷ ವಯಸ್ಸಿನ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. ಹೀಗಾಗಿ ನಗರದ ವಿಮ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ಕೌಲ್ ಬಜಾರ್ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಈತ 10 ವರ್ಷದ ಹಿಂದಿನ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ.