ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಸುತ್ತ ಮುತ್ತಲು ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಮುಂಜಾಗೃತ ಕ್ರಮವಾಗಿ ಆಗಸ್ಟ್ 3 ರಿಂದ 7ರವರೆಗೆ ಐದು ದಿನಗಳ ಕಾಲ ವಿಶ್ವವಿದ್ಯಾಲಯಕ್ಕೆ ರಜೆ ಘೋಷಿಸಲಾಗಿದೆ ಎಂದು ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ ತಿಳಿಸಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಹಿತದೃಷ್ಠಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಈ ರಜಾ ಅವಧಿ ದಿನಗಳಲ್ಲಿ ಆಯಾ ಅಧ್ಯಯನ, ಆಡಳಿತ ವಿಭಾಗದ ಮುಖ್ಯಸ್ಥರು, ನಿರ್ದೇಶಕರು, ಸಂಯೋಜನಾಧಿಕಾರಿ, ನಿಲಯ ಪಾಲಕರು, ಆಸ್ಪತ್ರೆಯ ವೈದ್ಯರು, ಅಧಿಕಾರಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ದೂರವಾಣಿ ಮತ್ತು ಇ-ಮೇಲ್‌ಗಳ ಮೂಲಕ ಸಂಪರ್ಕಿಸಬೇಕು. ಆದರೆ, ಕೇಂದ್ರಸ್ಥಾನವನ್ನು ಬಿಡುವಂತಿಲ್ಲ. ಅಗತ್ಯವಿದ್ದಾಗ ವಿವಿಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧ್ಯಯನ ಮತ್ತು ಆಡಳಿತ ಸಿಬ್ಬಂದಿ ಮನೆಯಿಂದಲೇ ಕಾರ್ಯವನ್ನು ನಿರ್ವಹಿಸಬೇಕು. ಅಧ್ಯಯನ ಮತ್ತು ಆಡಳಿತ ಸಿಬ್ಬಂದಿಯ ಕರ್ತವ್ಯ ನಿರತ ರಜೆಯನ್ನು ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.