ETV Bharat / state

ನಾಳೆ ನೆರೆ ಪರಿಹಾರ ನೀಡದ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ..

author img

By

Published : Oct 4, 2019, 3:25 PM IST

ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿಗೆ ಪರಿಹಾರ ಬಿಡುಗಡೆಯಾಗದಿರುವುದು ಹಾಗೂ ರಾಜ್ಯದ 25 ಸಂಸದರ ಬೇಜವಾಬ್ದಾರಿಯನ್ನು ಖಂಡಿಸಿ ಸೆಪ್ಟಂಬರ್ 5ರಂದು ಬಹುಜನ ಸಮಾಜವಾದಿ ಪಕ್ಷ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಬಹುಜನ ಸಮಾಜವಾದಿ ಪಕ್ಷದಿಂದ ಪತ್ರಿಕಾಗೋಷ್ಠಿ

ಬಳ್ಳಾರಿ:ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿಗೆ ಕೇಂದ್ರದಿಂದ ಪರಿಹಾರ ಹಣಬಾರದಿರುವುದನ್ನು ಖಂಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೆಪ್ಟಂಬರ್ 5ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಹುಜನ ಸಮಾಜವಾದಿ ಪಕ್ಷ ಮುಖಂಡ ಮಲ್ಲಯ್ಯ ಹೆಗಡೆ ತಿಳಿಸಿದ್ದಾರೆ.

ಬಹುಜನ ಸಮಾಜವಾದಿ ಪಕ್ಷದಿಂದ ಪತ್ರಿಕಾಗೋಷ್ಠಿ..

ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಪರಿಹಾರದ ಹಣವನ್ನು ಹೆಚ್ಚಿಸಬೇಕು. ಕೂಡಲೇ ಕೇಂದ್ರದಿಂದ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ನಗರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಮುಂಬರುವ ಉಪಚುನಾವಣೆಯಲ್ಲಿ ವಿಜಯನಗರ ಕ್ಷೇತ್ರಕ್ಕೆ ಬಹುಜನ ಸಮಾಜ ಪಕ್ಷವು ಸ್ಪರ್ಧೆ ನಡೆಸಲಿದೆ ಎಂದು ಹೇಳಿದರು. ಮಹ್ಮದ್‌ ಭಾಷಾ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಲ್ಲಯ್ಯ ಹೆಗಡೆ, ಹೊಸಪೇಟೆ ಪ್ರಧಾನ ಕಾರ್ಯದರ್ಶಿ ಬಂಬಣ್ಣ, ಜಿಲ್ಲಾಧ್ಯಕ್ಷ ಈರಣ್ಣ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಪ್ಪ, ನೂರ ಮಹ್ಮದ್ ಹಾಜರಿದ್ದರು.

Intro:
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೆರೆ ಹಾವಳಿ ಪರಿಹಾರ ದೊರೆತ್ತಿಲ್ಲ ಎಂದು ಕರ್ನಾಟಕದ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ನಾಳೆ ಬೆಳಿಗ್ಗೆ ಬಹುಜನ ಸಮಾಜ ಪಕ್ಷದಿಂದ ಪ್ರತಿಭಟನೆ ಮಾಡಿಲಾಗುತ್ತದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಲ್ಲಯ್ಯ ಹೆಗಡೆ ತಿಳಿಸಿದರು.

Body:.

ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಯ್ಯ ಹೆಗಡೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಸರಿಯಾದ ರೀತಿಯಲ್ಲಿ ನೆರೆ ಹಾವಳಿ ಪರಿಹಾರವನ್ನು ವಿತರಣೆ ಮಾಡುತ್ತಿಲ್ಲ ಎಂದು ದೂರಿದರು.
ಇದಕ್ಕೆ ಸಂಭಂದಿಸಿದಂತೆ ನಾಳೆ ಬೆಳಿಗ್ಗೆ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮತ್ತು ರಾಷ್ಟಪತಿಗಳಿಗೆ ಮನವಿಯನ್ನು ಸಲ್ಲಿಸುತ್ತಿದ್ದೆವೆ ಎಂದು ಮಲ್ಲಯ್ಯ ಹೆಗಡೆ ತಿಳಿಸಿದರು.

ಉತ್ತರ ಕರ್ನಾಟಕ ನೆರೆಹಾವಳಿಗೆ ಒಳಗಾದ ಕುಟುಂಬಗಳ ಒಂದು ಮನೆ ನಿರ್ಮಾಣಕ್ಕೆ 7 ರಿಂದ 10 ಲಕ್ಷ ರೂಪಾಯಿ ನೀಡಬೇಕೆಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಮುಂದೆ ನಡೆಯುವ ಉಪಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದ ಅಭ್ಯರ್ಥಿಯಾಗಿ ಬಹುಜನ ಸಮಾಜ ಪಕ್ಷದಿಂದ ಸ್ಪರ್ಧೆ ಮಾಡಲಾಗುತ್ತದೆ ಎಂದು ತಿಳಿಸಿದರು.

Conclusion:ಈ ಸುದ್ದಿಗೋಷ್ಠಿಯಲ್ಲಿ ಬಹುಜನ ಸಮಾಜ ಪಕ್ಷ ವಿಭಾಗದ ಸಂಯೋಜಕ ಮಹಮ್ಮದ್ ಭಾಷಾ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಲ್ಲಯ್ಯ ಹೆಗಡೆ, ಹೊಸಪೇಟೆ ಪ್ರಧಾನ ಕಾರ್ಯದರ್ಶಿ ಬಂಬಣ್ಣ, ಜಿಲ್ಲಾಧ್ಯಕ್ಷ ಈರಣ್ಣ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಪ್ಪ, ನೂರ ಮಹಮ್ಮದ್ ಹಾಜರಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.