ಹೊಸಪೇಟೆ: ಹಂಪಿಯ ತುಂಗಭದ್ರಾ ನದಿಯಲ್ಲಿ ಮಕರ ಸಂಕ್ರಾಂತಿ ನಿಮಿತ್ತ ನೂರಾರು ಭಕ್ತರು ನದಿಯಲ್ಲಿ ಪುಣ್ಯಸ್ನಾನ ಮಾಡಿದರು.
ಎಲ್ಲೆಡೆ ಇಂದು ಸಂಕ್ರಾಂತಿ ಹಬ್ಬದ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆ ಬೆಳಗಿನ ಜಾವದಿಂದ ಭಕ್ತರು ಪುಣ್ಯಸ್ನಾನಕ್ಕೆ ಆಗಮಿಸಿರುತ್ತಿರುವುದು ಕಂಡು ಬಂತು. ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ಆಂಧ್ರಪ್ರದೇಶದ, ತೆಲಂಗಾಣ ರಾಜ್ಯದಿಂದ ಭಕ್ತರು ಪುಣ್ಯಸ್ನಾನಕ್ಕೆ ಬಂದಿದ್ದರು.
ಪುಣ್ಯ ಸ್ನಾನ ಬಳಿಕ ಸರತಿ ಸಾಲಿನಲ್ಲಿ ನಿಂತು ವಿರೂಪಾಕ್ಷೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಪಂಪಾಂಬಿಕೆ ಹಾಗೂ ಭುವನೇಶ್ವರಿ ದೇವಿಯ ದರ್ಶನವನ್ನು ಪಡೆದುಕೊಂಡರು. ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಹ ಪುಣ್ಯಸ್ನಾನ ಮಾಡಿ ದೇವರ ದರ್ಶನವನ್ನು ಪಡೆದುಕೊಂಡರು.
ಈ ಸುದ್ದಿಯನ್ನೂ ಓದಿ: ಆನೆಗೊಂದಿ ಆಂಜನೇಯ ದೇಗುಲದ ಬಳಿ ಚಿರತೆ ಮರಿ ಪ್ರತ್ಯಕ್ಷ
ನದಿಯಲ್ಲಿ ಸ್ನಾನ ಮಾಡುವವರಿಗೆ ಗೃಹರಕ್ಷಕ ದಳದ ಸಿಬ್ಬಂದಿ ಜಾಗ್ರತೆ ವಹಿಸಬೇಕು ಎಂದು ಎಚ್ಚರಿಸುತ್ತಿರುವ ದೃಶ್ಯಗಳೂ ಕೂಡ ಕಂಡುಬಂದಿತು.