ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಳಿ ಭಾಗದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಗುಂಡಾ ಮತ್ತು ಜಿ.ನಾಗಲಾಪುರ ಗ್ರಾಮಗಳ ನಡುವಿನ ಹಳ್ಳ ತುಂಬಿ ಹರಿಯುತ್ತಿದ್ದು, ಗ್ರಾಮಗಳ ನಡುವಿನ ಸಂಚಾರ ಕಡಿತಗೊಂಡಿದೆ. ಇದರಿಂದಾಗಿ ಸ್ಥಳೀಯರು ಸಂಚಾರಕ್ಕೆ ಪರಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ದಶಕಗಳಿಂದ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಆದರೆ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಸೇತುವೆ ನಿರ್ಮಾಣ ಕಾರ್ಯ ನನೆಗುದಿಗೆ ಬಿದ್ದಿದೆ.
ಗುಂಡಾ ಗ್ರಾಮದಿಂದ ಜಿ.ನಾಗಲಾಪುರ ಗ್ರಾಮಕ್ಕೆ ಹಳ್ಳದ ದಾರಿ ಸಮೀಪವಾಗಿದೆ. ಈಗ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಮರಿಯಮ್ಮನಹಳ್ಳಿಯಿಂದ ಓಡಾಡವಂತಾಗಿದೆ. ಇದರಿಂದಾಗಿ ಹೆಚ್ಚುವರಿ 12 ಕಿ.ಮೀ. ಕ್ರಮಿಸುವ ಪರಿಸ್ಥಿತಿ ಬಂದಿದೆ ಎಂದು ರೈತರು ಅಳಲನ್ನು ತೋಡಿಕೊಂಡಿದ್ದಾರೆ.