ಬಳ್ಳಾರಿ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ ಬಳ್ಳಾರಿ ನೇತೃತ್ವದಲ್ಲಿ ಕೊರೊನಾ ವೈರಸ್ ತಡೆಗಟ್ಟುವಲ್ಲಿ ಹೋಮಿಯೋಪತಿ ಔಷಧಗಳ ಪಾತ್ರ ಮಹತ್ವದ್ದಾಗಿರುವ ಹಿನ್ನೆಲೆಯಲ್ಲಿ, ಮಾಧ್ಯಮದ ಪ್ರತಿನಿಧಿಗಳಿಗೆ ಉಚಿತ ಮಾತ್ರೆಗಳ ವಿತರಣೆ ಕಾರ್ಯಕ್ರಮ ನಡೆಯಿತು.
ನಗರದ ಪತ್ರಿಕಾ ಭವನದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಹರಗಿನದೋಣಿಯ ಆಯುಷ್ ವೈದ್ಯಾಧಿಕಾರಿ ಡಾ. ಶಶಿಧರ್ ರಾಮದುರ್ಗ ಮಾತನಾಡಿ, ಜಿಲ್ಲಾ ಆಯುಷ್ ಇಲಾಖೆಯಿಂದ ಕೊರೊನಾ ವೈರಸ್ ತಡೆಗಟ್ಟುವಲ್ಲಿ ಹೋಮಿಯೋಪತಿ ಔಷಧಗಳ ಪಾತ್ರ ಮತ್ತು ಮಾಧ್ಯಮದ ಪ್ರತಿನಿಧಿಗಳಿಗೆ ಉಚಿತ ಮಾತ್ರೆಗಳ ವಿತರಣೆ ಮಾಡಿದ್ದೇವೆ. ಈ ಹಿಂದೆ ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಗೇ ಕಂದಾಯ ಇಲಾಖೆಗೆ ಉಚಿತವಾಗಿ ವಿತರಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.
ಮಾತ್ರೆ ತೆಗೆದುಕೊಳ್ಳುವ ಕ್ರಮ : ನಿರಂತರವಾಗಿ ಮೂರು ದಿನ ಬೆಳಗ್ಗೆ ಮತ್ತು ರಾತ್ರಿ ಖಾಲಿ ಹೊಟ್ಟೆಯಲ್ಲಿ ಒಂದು ಮಾತ್ರೆ ತೆಗೆದುಕೊಳ್ಳಬೇಕು. ನಂತರ ವಾರಕ್ಕೆ ಒಂದು ಮಾತ್ರೆ ಬೆಳಗ್ಗೆ ಅಥವಾ ರಾತ್ರಿ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. ಐದು ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರೂ ಮಾತ್ರೆ ತೆಗೆದುಕೊಳ್ಳಬಹುದು.
ಜಿಲ್ಲಾ ಆಯುಷ್ ಇಲಾಖೆಯಲ್ಲಿ ಉಚಿತವಾಗಿ ಮಾತ್ರೆ ವಿತರಣೆ ಮಾಡಲಾಗುತ್ತದೆ. ಸಾರ್ವಜನಿಕರು ಮಾತ್ರೆ ಪಡೆಯಲು ಆಧಾರ ಕಾರ್ಡ್ ತಂದು ಉಚಿತ ಮಾತ್ರೆಗಳನ್ನು ಪಡೆಯಬಹುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ವರಪ್ರಸಾದ್, ಎಒ ಶರಣಬಸಪ್ಪ ಜಿನಿಗ, ಡಾ.ಶಶಿಧರ್ ರಾಮದುರ್ಗ, ಡಾ.ಪಣೇಂದ್ರ, ಡಾ.ಜಿತೇಂದ್ರ ಇನ್ನಿತರರು ಹಾಜರಿದ್ದರು.