ETV Bharat / state

ಗಾಂಧಿ ಭವನದ ಎದುರಿಗಿರುವ ಕಟ್ಟಡಗಳ ‌ನೆಲಸಮಕ್ಕೆ ಡಿಸಿ ಸೂಚನೆ

author img

By

Published : May 11, 2019, 6:35 PM IST

ಜಿಲ್ಲಾಧಿಕಾರಿ ಕಚೇರಿ ಆವರಣದ ಸ್ಪಂದನ‌ ಕೇಂದ್ರ ಬಳಿ ನೂತನವಾಗಿ ನಿರ್ಮಿಸುತ್ತಿರುವ ಗಾಂಧಿ ಭವನ ಎದುರಿರುವ ಎರಡು ಕಟ್ಟಡಗಳನ್ನು ಕೂಡಲೇ ನೆಲಸಮಗೊಳಿಸಬೇಕೆಂದು ಬಳ್ಳಾರಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಗಾಂಧಿಭವನದ ಎದುರಿಗಿರುವ ಕಟ್ಟಡಗಳ ‌ನೆಲಸಮಕ್ಕೆ ಡಿಸಿ ಸೂಚನೆ!

ಬಳ್ಳಾರಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದ ಸ್ಪಂದನ‌ ಕೇಂದ್ರದ ಬಳಿ ನೂತನವಾಗಿ ನಿರ್ಮಿಸುತ್ತಿರುವ ಗಾಂಧಿ ಭವನ ಎದುರಿರುವ ಎರಡು ಕಟ್ಟಡಗಳನ್ನು ಕೂಡಲೇ ನೆಲಸಮಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ. ವಿ.ರಾಮಪ್ರಸಾತ್ ಮನೋಹರ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕರ ಕಟ್ಟಡ, ಸಹಾಯಕ ನಿರ್ದೇಶಕರ ಕಟ್ಟಡ, ಸ್ಪಂದನ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಟ್ಟಡ ಸೇರಿದಂತೆ ಇನ್ನಿತರೆ ಕಟ್ಟಡಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. ಗಾಂಧಿ ಭವನದೆದುರಿರುವ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಚೇರಿ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಕಟ್ಟಡಗಳನ್ನು ಕೂಡಲೇ ನೆಲಸಮಗೊಳಿಸಿ ಭವನದ ಸೌಂದರ್ಯಕ್ಕೆ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನೂ ಕೆಲ ಕಚೇರಿಗಳಿಗೆ ಕೊಠಡಿಗಳ ಕೊರತೆಯಿದೆ. ಅವುಗಳ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಡಿಪಿಎಆರ್ ರೂಪಿಸಿ ನೀಡಿ, ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

Intro:ಗಾಂಧಿಭವನ ಎದುರಿರುವ ಕಟ್ಟಡಗಳ ‌ನೆಲಸಮಕ್ಕೆ ಡಿಸಿ ಸೂಚನೆ!
ಬಳ್ಳಾರಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದ ಸ್ಪಂದನ‌ ಕೇಂದ್ರ ಬಳಿ ನೂತನವಾಗಿ ನಿರ್ಮಿಸುತ್ತಿರುವ ಗಾಂಧಿಭವನ ಎದುರಿರುವ ಎರಡು ಕಟ್ಟಡಗಳನ್ನು ಕೂಡಲೇ ನೆಲಸಮಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾತ್ ಮನೋಹರ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿ ಇರುವ ಭೂದಾಖಲೆಗಳ ಇಲಾಖೆ ಉಪನಿರ್ದೇಶಕರ ಕಟ್ಟಡ, ಸಹಾಯಕ ನಿರ್ದೇಶಕರ ಕಟ್ಟಡ, ಸ್ಪಂದನ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಟ್ಟಡ ಸೇರಿದಂತೆ ಇನ್ನಿತರೆ ಕಟ್ಟಡ ಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.‌ ಗಾಂಧಿಭವನದ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದ ಅವರು, ಗಾಂಧಿ ಭವನದ ಎದುರು ಇರುವ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಚೇರಿ ಹಾಗೂ ಭೂ ದಾಖಲೆ ಗಳ ಸಹಾಯಕ ನಿರ್ದೇಶಕರ ಕಚೇರಿಯ ಕಟ್ಟಡಗಳನ್ನು ಕೂಡಲೇ ನೆಲಸಮಗೊಳಿಸಿ ಭವನದ ಸೌಂದರೀಕರಣಕ್ಕೆ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
Body:ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಸ್ಪಂದನ ಕಚೇರಿಯಲ್ಲಿ ಖಾಲಿ ಇರುವ ಕೊಠಡಿಗಳನ್ನು ಒದಗಿಸಿ ಎಂದು ಅಪರ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಇನ್ನೂ ಕೆಲ ಕಚೇರಿಗಳಿಗೆ ಕೊಠಡಿಗಳ ಕೊರತೆಯಿದೆ. ಅವುಗಳ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಡಿಪಿಎಆರ್ ರೂಪಿಸಿ ನೀಡಿ, ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. 
ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶಕುಮಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ನಿರ್ಮಿತ ಕೇಂದ್ರದ ಅನಿಲ ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_02_11_DC_VISIT_IN_GANDHI_BHAVANA_7203310

KN_BLY_02d_11_DC_VISIT_IN_GANDHI_BHAVANA_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.