ETV Bharat / state

ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತು ಅಳವಡಿಸುವ ಮುನ್ನ ಪರವಾನಗಿ ಕಡ್ಡಾಯ: ಆಯುಕ್ತೆ ಪ್ರೀತಿ ಗೆಹ್ಲೋಟ್​​ - ಆಯುಕ್ತೆ ಪ್ರೀತಿ ಗೆಹ್ಲೋಟ್​​ ಆದೇಶ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸ್ಥಳಗಳಲ್ಲಿ ಜಾಹೀರಾತುಗಳನ್ನು ಅಳವಡಿಸುವ ಪೂರ್ವ, ಪಾಲಿಕೆಯಿಂದ ಪರವಾನಗಿ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಜೈಲು ಶಿಕ್ಷೆ ಜೊತೆಗೆ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಎಚ್ಚರಿಕೆ ನೀಡಿದ್ದಾರೆ.

ಪ್ರೀತಿ ಗೆಹ್ಲೋಟ್​​
Preeti Gehlot
author img

By

Published : Feb 5, 2021, 1:19 PM IST

ಬಳ್ಳಾರಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸ್ಥಳಗಳಲ್ಲಿ ಜಾಹೀರಾತುಗಳನ್ನು ಅಳವಡಿಸುವ ಪೂರ್ವದಲ್ಲಿ ಪಾಲಿಕೆ ವತಿಯಿಂದ ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದ್ದಲ್ಲಿ ಜೈಲು ಶಿಕ್ಷೆ ಜೊತೆಗೆ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಗರದ ವಿವಿಧ ಸ್ಥಳಗಳಲ್ಲಿ ಸಂಘ - ಸಂಸ್ಥೆಗಳ, ರಾಜಕೀಯ ಪಕ್ಷಗಳು, ಖಾಸಗಿ ವ್ಯಕ್ತಿಗಳು, ಧಾರ್ಮಿಕ ಸಂಸ್ಥೆಗಳು ಹಾಗೂ ಇತರ ಸಂಘಟನೆಗಳು ಫ್ಲೆಕ್ಸ್​ಗಳು, ಬ್ಯಾನರ್​ಗಳು ಹಾಗೂ ಧರ್ಮಕ್ಕೆ ಸಂಬಂಧಿಸಿದ ಬಾವುಟಗಳನ್ನು ಸರ್ಕಾರಿ ಅಥವಾ ಖಾಸಗಿ ಆಸ್ತಿಗಳ ಮೇಲೆ ಆಗಲಿ, ವಿದ್ಯುತ್​ ಕಂಬಗಳು, ಮೀಡಿಯನ್ಸ್, ಡಿವೈಡರ್ಸ್, ರಸ್ತೆ ಬದಿಯ ಮರಗಳು ಹಾಗೂ ವೃತ್ತಗಳಲ್ಲಿ ಪರವಾನಗಿ ಇಲ್ಲದೇ ಜಾಹೀರಾತುಗಳನ್ನು ಅಂಟಿಸಬಾರದು ಎಂದು ವಿವರಿಸಿದ್ದಾರೆ.

ಪೂರ್ವ ಪರವಾನಗಿ ಪಡೆದವರು ಮಹಾನಗರಪಾಲಿಕೆ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅಳವಡಿಸಬೇಕು. ಪರವಾನಗಿ ಪಡೆಯದೇ ಅಂಟಿಸಿದ್ದಲ್ಲಿ ಕಾಯ್ದೆ -1981ರ ಕಾಲಂ ನಂ.3ರ ಪ್ರಕಾರ ಪ್ರಕರಣ ದಾಖಲಿಸಿ, 6 ತಿಂಗಳು ಜೈಲು ಶಿಕ್ಷೆ ಅಥವಾ ರೂ.1000 ದಂಡ ಅಥವಾ ಈ ಎರಡು ದಂಡನೆಯನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.