ಬಳ್ಳಾರಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಡಾ.ಡಿ.ಎಲ್.ರಮೇಶ ಗೋಪಾಲ್ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ.
ವೈಯುಕ್ತಿಕ ಕಾರಣ ನೀಡಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ರಮೇಶ ಗೋಪಾಲ್ ಮುಂದಾಗಿದ್ದಾರೆ. ಅಲ್ಲದೇ ತಮ್ಮ ಅವಧಿಯಲ್ಲಿ ಸಹಕರಿಸಿದ ಎಲ್ಲ ಸದಸ್ಯರು ಹಾಗೂ ಜಿಲ್ಲಾ ಕೈಗಾರಿಕೆ ಸಂಸ್ಥೆಯ ಪದಾಧಿಕಾರಿಗಳಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರೋದು ಮಾತ್ರ ಯಾವುದೇ ನಿರ್ದಿಷ್ಟ ಕಾರಣವನ್ನೂ ತಿಳಿಸಿಲ್ಲ. ಹೀಗಾಗಿ ಇವರ ರಾಜೀನಾಮೆ ಕೈಗಾರಿಕೆ ಸಂಸ್ಥೆಯಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಗುಮಾನಿ ಮೂಡಿಸಿದೆ.
ಬಳ್ಳಾರಿಯ ಆಂಧ್ರ ಬ್ಯಾಂಕಿನಲ್ಲಿ ತಮ್ಮ ವ್ಯವಹಾರಕ್ಕೆಂದು ಲಕ್ಷಾಂತರ ರೂ.ಗಳ ಮೊತ್ತದ ಸಾಲವನ್ನು ಪಡೆದಿದ್ದ ಡಾ.ರಮೇಶಗೋಪಾಲ್ ಅವರು, ಅದನ್ನು ಮರುಪಾವತಿಸಿದ ಕಾರಣ, ಬ್ಯಾಂಕಿನ ಸುಸ್ತಿದಾರರ ಪಟ್ಟಿಯಲ್ಲಿ ಅವರ ಹೆಸರಿತ್ತು. ಅದನ್ನು ನೋಟಿಸ್ ಬೋರ್ಡಿಗೆ ಅಂಟಿಸಲಾಗಿತ್ತು. ಅಲ್ಲಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರಬಹುದು ಎಂಬ ಆರೋಪವು ಇಲ್ಲಿ ಕೇಳಿ ಬಂದಿದೆ.