ಬಳ್ಳಾರಿ: ಮಹಾನಗರಕ್ಕೆ ಕುಡಿಯುವ ನೀರು ಪೂರೈಸುವ ಅಲ್ಲೀಪುರ ಹಾಗೂ ಶಿವಪುರ ಕುಡಿಯುವ ನೀರಿನ ಕೆರೆಗಳಲ್ಲಿ ನೀರಿನ ಲಭ್ಯತೆಯಿದ್ದರೂ 15 ದಿನಗಳಿಗೊಮ್ಮೆ ಅಥವಾ ವಾರಕ್ಕೊಮ್ಮೆ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಖಾಸಗಿ ಟ್ಯಾಂಕರ್ಗಳನ್ನು ಆಶ್ರಯಿಸುತ್ತಿದ್ದಾರೆ.
ಖಾಸಗಿ ಟ್ಯಾಂಕರ್ಗಳಿಂದ ಮನೆಗಳ ನೀರಿನ ತೊಟ್ಟಿಗೆ ನೀರು ಪೂರೈಕೆ ಮಾಡಲು 600 ರೂ. ವಸೂಲಿ ಮಾಡಲಾಗುತ್ತದೆ. ಆದರೂ 15 ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದಾರೆ. ಹೀಗಾಗಿ ಖಾಸಗಿ ಟ್ಯಾಂಕರ್ಗಳಿಗೆ ಬೇಡಿಕೆ ಹೆಚ್ಚುತ್ತಿದೆ.
ಮಹಾನಗರದ ಬಹುತೇಕ ಕಡೆಗಳಲ್ಲಿ ಖಾಸಗಿ ಟ್ಯಾಂಕರ್ಗಳು ಸಂಚರಿಸುತ್ತಿವೆ. ಈ ದೃಶ್ಯಾವಳಿ ಕಂಡರೂ ಕೂಡ ಬಳ್ಳಾರಿ ಮಹಾನಗರ ಪಾಲಿಕೆ ಅಧಿಕಾರಿ ವರ್ಗ ಮೂಕ ಪ್ರೇಕ್ಷಕರಂತೆ ವರ್ತಿಸುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.