ಬಳ್ಳಾರಿ: ಬಳ್ಳಾರಿ ಗ್ರಾಮೀಣ ವಿಭಾಗದ ಡಿವೈಎಸ್‌ಪಿ ಎಂ.ಜಿ.ಸತ್ಯನಾರಾಯಣ ಅವರು ಠಾಣೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡಿರುವುದು ಸಾಮಾಜಿಕ ಜಾಲತಾಣಗಳ ಮೂಲಕ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಹೆಚ್ಚುವರಿ ಎಸ್‌ಪಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.
ಗುರುವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಡಿವೈಎಸ್‌ಪಿ ಎಂ.ಜಿ.ಸತ್ಯನಾರಾಯಣ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಸಿಬ್ಬಂದಿ ಹಾಗೂ ಕನ್ನಡಪರ ಸಂಘಟನೆಯ ಮುಖಂಡರೊಬ್ಬರೊಂದಿಗೆ ಠಾಣೆಯಲ್ಲಿ ಕೇಕ್ ಕತ್ತರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಪೊಲೀಸ್ ಠಾಣೆಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ, ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ. ಒಂದು ವೇಳೆ ಆದೇಶ ಉಲ್ಲಂಘನೆ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಡಿಜಿಪಿ ಖಡಕ್ ಆದೇಶ ಹೊರಡಿಸಿದ್ದರು.