ಹೊಸಪೇಟೆ: ನಗರದ ಚಿತ್ತಾವಡ್ಗಿ ವಿನೋಬಾಭಾವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಪ ವಿಭಾಗಾಧಿಕಾರಿ ಸಿದ್ದರಾಮೇಶ್ವರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದರು.
ಜ.20 ರಂದು ಈಟಿವಿ ಭಾರತ ಶಾಲೆಯ ಕುರಿತು 'ಅನೈತಿಕ ಚಟುವಟಿಕೆಗಳ ತಾಣವಾದ ಶಾಲಾ ಆವರಣ: ಕಿಡಿಗೇಡಿಗಳ ಪುಂಡಾಟಕ್ಕೆ ಹೈರಾಣ' ಎಂಬ ಶೀರ್ಷಿಕೆಯಡಿಯಲ್ಲಿ ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ರತ್ನಮ್ಮ ಅವರು ಮಾತನಾಡಿ, ಈಗಾಗಲೇ ಉಪವಿಭಾಗಾಧಿಕಾರಿಯ ಸೂಚನೆಯಂತೆ ಚಿತ್ತವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಿಡಿಗೇಡಿಗಳ ಪುಂಡಾಟಕ್ಕೆ ಕಡಿವಾಣ ಹಾಕುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ ಎಂದರು.