ETV Bharat / state

ಶಾಕಿಂಗ್​​ ನ್ಯೂಸ್​:  ಗಣಿಜಿಲ್ಲೆಯಲಿ ಒಂದೇ ದಿನ ಕೊರೊನಾಕ್ಕೆಎಂಟು ಬಲಿ! - ಒಟ್ಟು ಸಾವಿನ ಸಂಖ್ಯೆ

ಬಳ್ಳಾರಿಯಲ್ಲಿ ಕೊರೊನಾ ಹಾವಳಿ ತೀವ್ರವಾಗಿದೆ. ಇಂದು ಒಂದೇ ದಿನ 8 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

corona
ಕೊರೊನಾ
author img

By

Published : Jun 29, 2020, 1:40 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ ಈ ಮಹಾಮಾರಿ ಕೊರೊನಾ ಸೋಂಕಿಗೆ ಎಂಟು ಮಂದಿ ಬಲಿಯಾಗಿದ್ದಾರೆ. ಹೀಗಾಗಿ, ಜಿಲ್ಲೆಯಲ್ಲಿ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ನೆರೆಯ ಆಂಧ್ರಪ್ರದೇಶ ಮೂಲದ ಕರ್ನೂಲ್ ಜಿಲ್ಲೆಯ 52 ವರ್ಷ ವಯೋಮಾನದ ಮಹಿಳೆ, ಕೊಪ್ಪಳ ಜಿಲ್ಲೆಯ ರಂಗಾಪುರ ಕ್ಯಾಂಪಿನ 43 ವರ್ಷ ವಯೋಮಾನದ ಪುರುಷ, ಹೊಸಪೇಟೆ ತಾಲೂಕಿನ ಧರ್ಮಸಾಗರದ 56 ವರ್ಷ ವಯೋಮಾನದ ಪುರುಷ, ಹೊಸಪೇಟೆಯ ಆಜಾದ್​ನಗರದ 66 ವರ್ಷ ವಯೋಮಾನದ ಪುರುಷರೊಬ್ಬರು ಸೇರಿದಂತೆ ಎಂಟು ಮಂದಿ ಇಂದು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ನಕುಲ್​ ಸ್ಪಷ್ಟಪಡಿಸಿದ್ದಾರೆ.

ತೀವ್ರ ಉಸಿರಾಟದ ತೊಂದರೆ, ಜ್ವರ ಮತ್ತು ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಈ ಎಂಟು ಮಂದಿಯನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಸೋಂಕಿರೋದು ದೃಢಪಟ್ಟಿತ್ತು. ಕೊರೊನಾ ಮಾರ್ಗಸೂಚಿಯಂತೆ ಎಂಟು ಮಂದಿ ಅಂತ್ಯಕ್ರಿಯೆಯನ್ನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.