ವಿಜಯನಗರ: ನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರೈತ ಶವವಾಗಿ ಪತ್ತೆಯಾಗಿದ್ದಾನೆ. ಈ ಘಟನೆ ಹೊಸಪೇಟೆ ತಾಲೂಕಿನ ಗರಗ-ನಾಗಲಾಪುರ ಗ್ರಾಮದಲ್ಲಿ ನಡೆದಿದೆ. ಉಂಚೋಟಿ ಬೊಮ್ಮಪ್ಪ ಎಂಬುವವರು ಜಮೀನಿಗೆ ನೀರು ನುಗ್ಗಿರಬಹುದೆಂದು ಎಂದು ನೋಡಲು ತೆರಳಿದ್ದರು. ಈ ಸಂದರ್ಭದಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ನೀರು ಪಾಲಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಐದಾರು ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ: ಭಟ್ಕಳದಲ್ಲಿ ಮನೆ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರು ಸಾವು