ಹೊಸಪೇಟೆ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ರೈತರು ಹಾಗೂ ಸಂಘಟನೆ ಮುಖಂಡರು ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ ರೋಕೊ ಚಳುವಳಿ ನಡೆಸಲು ಮುಂದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.
ಓದಿ: ತಮ್ಮ ವಿರುದ್ಧದ ದೂರನ್ನು ತಪ್ಪಾಗಿ ಅನುವಾದಿಸಿದ ಪುದುಚೆರಿ ಸಿಎಂ!
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಧಿಕ್ಕಾರ ಕೂಗಿದರು. ಈ ಮೊದಲು ಕನಕದಾಸ ವೃತ್ತದಿಂದ ರೈಲ್ವೆ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದೆಹಲಿಯಲ್ಲಿ ರೈತರು ಸತತ 88 ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ, ಇಲ್ಲಿಯವರೆಗೂ ಪ್ರಧಾನಿ ಅಥವಾ ಮಂತ್ರಿಗಳಾಗಲಿ ರೈತರ ಸಮಸ್ಯೆಗೆ ಸ್ಪಂದಿಸಿಲ್ಲ. ಪ್ರಧಾನಿ ಅವರು ರೈತರ ಹೋರಾಟದ ಬಗ್ಗೆ ತುಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ರೈತರ ಹಿತ ಕಡೆಗಣಿಸಿದೆ. ಬಂಡವಾಳಶಾಹಿ ಪರಿವಾರದ ನೀತಿಯನ್ನು ಅನುಸರಿಸುತ್ತಿದೆ. ಹಾಗಾಗಿ ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿದ್ದಾರೆ. ಕೂಡಲೇ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.