ETV Bharat / state

ಜಿಂದಾಲ್​​ಗೆ ಭೂಮಿ ಪರಭಾರೆ ವಿರೋಧಿಸಿ ರೈತರ ಪಾದಯಾತ್ರೆ: ಇಂದು ಸಭೆ - Protest

ಜಿಂದಾಲ್‌ ಸಮೂಹ ಸಂಸ್ಥೆಗೆ 3,667 ಎಕರೆ ಭೂಮಿಯನ್ನು ಪರಭಾರೆ ಮಾಡುವುದನ್ನು ವಿರೋಧಿಸಿ ಜಿಲ್ಲೆಯ ರೈತರು ಗುರುವಾರ ಪಾದಯಾತ್ರೆ ನಡೆಸಿದರು.

farmers protest against jindal company
author img

By

Published : Aug 9, 2019, 2:52 AM IST

ಬಳ್ಳಾರಿ: ಜಿಂದಾಲ್‌ ಸಮೂಹ ಸಂಸ್ಥೆಗೆ 3,667 ಎಕರೆ ಭೂಮಿಯನ್ನು ಪರಭಾರೆ ಮಾಡುವುದನ್ನು ವಿರೋಧಿಸಿ ಜಿಲ್ಲೆಯ ಸಂಡೂರು ತಾಲ್ಲೂಕಿನ ವಡ್ಡು ಗ್ರಾಮದಿಂದ ಬಳ್ಳಾರಿವರೆಗೆ ಗುರುವಾರ ಜನಸಂಗ್ರಾಮ ಪರಿಷತ್​​ ನೇತೃತ್ವದಲ್ಲಿ ರೈತರು ಪಾದಯಾತ್ರೆ ನಡೆಸಿದರು.

ಜನಸಂಗ್ರಾಮ ಪರಿಷತ್​ ಮುಖಂಡ ಎಸ್.ಆರ್.ಹಿರೇಮಠ ಅವರ ಸಮಕ್ಷಮದಲ್ಲಿ ವಡ್ಡು ಗ್ರಾಮದ ಹಳ್ಳದರಾಯ ದೇಗುಲದಿಂದ ಬೆಳಗ್ಗೆ 9ಕ್ಕೆ ಪಾದಯಾತ್ರೆಗೆ ಚಾಲನೆ ದೊರೆಯಿತು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ರೈತರು, ನೂರಾರು ಅಡಿ ಉದ್ದದ ಹಸಿರು ಶಾಲನ್ನು ಹಿಡಿದುಕೊಂಡೇ ಪಾದಯಾತ್ರೆಯಲ್ಲಿ ಮುಂದೆ ಸಾಗಿದರು.

ಗುರುವಾರ ಆರಂಭವಾಗಿರುವ ಪಾದಯಾತ್ರೆ, ಶುಕ್ರವಾರ ಬಳ್ಳಾರಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿಗೆ ತಲುಪಲಿದೆ. ನಂತರ ಸಂಕಲ್ಪ ಸಭೆ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ‌ಪತ್ರ ಸಲ್ಲಿಸಲಿದ್ದಾರೆ. ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯುವವರೆಗೂ ಹೋರಾಟ ನಿಲ್ಲದು ಎಂದು ಎಸ್.ಆರ್.ಹಿರೇಮಠ ಎಚ್ಚರಿಸಿದ್ದಾರೆ.

ಪಾದಯಾತ್ರೆ ನಡೆಸಿದ ರೈತರು

ಸಂಡೂರು ತಾಲೂಕಿನ ಕುರೆಕುಪ್ಪ, ಮುಸಿನಾಯಕನಹಳ್ಳಿ, ತೋರಣಗಲ್ಲು, ಸುಲ್ತಾನಪುರ ಗ್ರಾಮದ 3,667 ಎಕರೆ ಜಮೀನನ್ನು ಮಾರಾಟ ಮಾಡದೆ, ಗುತ್ತಿಗೆ ಅವಧಿ ವಿಸ್ತರಿಸಬೇಕು. ಜಿಂದಾಲ್‌ಗೆ ಈ ಕುರಿತು ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶರ ಸ್ವತಂತ್ರ ಸಮಿತಿಯಿಂದ ತನಿಖೆಗೆ‌ ಒಳಪಡಿಸಬೇಕು. ಭೂಮಿ ನೀಡಿದವರಿಗೆ ಉದ್ಯೋಗ ದೊರಕಿದೆಯೇ ಎಂಬುದರ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಜೀವ ಸಂಕುಲಕ್ಕೆ ಮಾರಕವಾದ ಎಪ್ಸಿಲಾನ್ ಡಾಂಬರು ಮತ್ತು‌ ಪೇಂಟ್ ಉತ್ಪಾದನಾ ಘಟಕಗಳನ್ನು ಮುಚ್ಚಬೇಕು. ಕುಮಾರಸ್ವಾಮಿ, ಪಾರ್ವತಿ‌ ದೇಗುಲದ 2 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಬೇಕು. ತುಂಗಭದ್ರಾ ಮತ್ತು ಆಲಮಟ್ಟಿ ಜಲಾಶಯದ ನೀರನ್ನು ಜಿಂದಾಲ್ ಅಕ್ರಮವಾಗಿ ಬಳಸದಂತೆ ತಡೆಗಟ್ಟಬೇಕು ಎಂದು ಆಗ್ರಹಿಸಿದ್ದಾರೆ.

ರೈತ ಸಂಘ, ಮಹಾತ್ಮಗಾಂಧಿ ವಿವಿಧೋದ್ದೇಶ ಸಹಕಾರಿ ಸಂಘ, ರೈತ ಕೃಷಿ ಕಾರ್ಮಿಕರ ಸಂಘ, ಚಾಗನೂರು-ಸಿರಿವಾರ ನೀರಾವರಿ ಭೂ ಹೋರಾಟ ಸಮಿತಿ ಹಾಗೂ ಇಸಿಪಿಎಲ್ ಕಾರ್ಖಾನೆ ವಿರೋಧಿ ಹೋರಾಟ ಸಮಿತಿಗಳ ಒಕ್ಕೂಟ ಈ ಪಾದಯಾತ್ರೆಗೆ ಬೆಂಬಲ ನೀಡಿವೆ. ಜಿಂದಾಲ್‌ಗೆ ಭೂಮಿ ಮಾರಾಟ ಮಾಡಬಾರದು ಎಂದು ಆಗ್ರಹಿಸಿ‌ ಧರಣಿ ನಡೆಸಿದ್ದ‌ ಬಿಜೆಪಿಯೇ ಈಗ ಅಧಿಕಾರದಲ್ಲಿ ಇರುವುದರಿಂದ ‌ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬಹುದು ಎಂಬ ನಿರೀಕ್ಷೆಯಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ನಿಲುವನ್ನು ಕೂಡಲೇ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

Intro:ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ವಿರೋಧಿಸಿ ಜನಸಂಗ್ರಾಮ ಪರಿಷತ್ ನಿಂದ ಬಳ್ಳಾರಿಯವರೆಗೆ ಪಾದಯಾತ್ರೆ..!
ಬಳ್ಳಾರಿ: ಜಿಂದಾಲ್‌ ಸಮೂಹ ಸಂಸ್ಥೆಗೆ 3,667 ಎಕರೆ ಭೂಮಿಯನ್ನು ಮಾರಾಟ ಮಾಡುವುದನ್ನು ವಿರೋಧಿಸಿ
ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಿಂದ ಬಳ್ಳಾರಿಯವರೆಗೆ ಇಂದು ಜನಸಂಗ್ರಾಮ ಪರಿಷತ್ ನಿಂದ ಪಾದಯಾತ್ರೆ ನಡೆಸಿತು.
ಜನಸಂಗ್ರಾಮ ಪರಿಷತ್ ನ ಮುಖಂಡರಾದ ಎಸ್.ಆರ್. ಹಿರೇಮಠ ಅವರ ಸಮಕ್ಷಮದಲ್ಲಿ ವಡ್ಡು ಗ್ರಾಮದ ಹಳ್ಳದರಾಯ ದೇಗುಲದಿಂದ ಈ ದಿನ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಈ ಬೃಹತ್ ಪಾದಯಾತ್ರೆಗೆ ಚಾಲನೆ ದೊರೆಯಿತು. ಕೆಲಕಾಲ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.‌ ಬಳಿಕ ನೂರಾರು ಅಡಿ ಉದ್ದದ ರೈತರ ಹಸಿರು ಶಾಲನ್ನು ಹಿಡಿದುಕೊಂಡೇ ಪಾದಯಾತ್ರೆಯಲ್ಲಿ ಮುಂದೆ ಸಾಗಿದರು. ನಾಳೆಯ ದಿನದಂದು ಬಳ್ಳಾರಿಗೆ ಬರಲಿರುವ ಈ ಪಾದಯಾತ್ರಿಗಳನ್ನು ಸುಧಾ ವೃತ್ತದ ಬಳಿಯಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಸ್ವಾಗತ ಕೋರಲಿದ್ದು, ನಂತರ ಸಂಕಲ್ಪ ಸಭೆ ನಡೆಯಲಿದೆ. ನಾಳೆ ಮಧ್ಯಾಹ್ನದ ವೇಳೆಗೆ ಈ ಪಾದಯಾತ್ರಿ ಗಳು ಜಿಲ್ಲಾಧಿಕಾರಿ ಕಚೇರಿಗೆ‌ ತೆರಳಿ, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ‌ಪತ್ರ ಸಲ್ಲಿಸಲಿದ್ದಾರೆ.
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ‌ ಚಳವಳಿಯ ಐತಿಹಾಸಿಕ ದಿನವಾದ ಆ. 9ರಂದೇ ಪಾದಯಾತ್ರೆ ಬಳ್ಳಾರಿ ನಗರದಲ್ಲಿ ಮುಕ್ತಾಯವಾಗಲಿದೆ ಭೂಮಿ ಮಾರಾಟ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವವರೆಗೂ ಹೋರಾಟ ನಿಲ್ಲದು ಎಂದು ಎಸ್.ಆರ್.ಹಿರೇಮಠ ತಿಳಿಸಿದ್ದಾರೆ.
ಸಂಡೂರು ತಾಲೂಕಿನ ಕುರೆಕುಪ್ಪ, ಮುಸಿನಾಯಕನಹಳ್ಳಿ, ತೋರಣಗಲ್ಲು, ಸುಲ್ತಾನಪುರ ಗ್ರಾಮದ 3,667 ಎಕರೆ ಜಮೀನನ್ನು ಮಾರಾಟ ಮಾಡದೆ, ಗುತ್ತಿಗೆ ಅವಧಿಯನ್ನು ವಿಸ್ತರಿಸಬೇಕು. ಜಿಂದಾಲ್‌ಗೆ ಇದುವರೆಗೆ ನೀಡಿರುವ ಭೂಮಿಯ ಕುರಿತು ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶರುಳ್ಳ ಸ್ವತಂತ್ರ ಸಮಿತಿಯಿಂದ ತನಿಖೆಗೆ‌ ಒಳಪಡಿಸಬೇಕು. ಭೂಮಿ ನೀಡಿದವರಿಗೆ ಉದ್ಯೋಗ ದೊರಕಿದೆಯೇ ಎಂಬುದರ ಕುರಿತು ತನಿಖೆ ನಡೆಸ ಬೇಕು. ಜೀವ ಸಂಕುಲಕ್ಕೆ ಮಾರಕವಾದ ಎಪ್ಸಿಲಾನ್ ಡಾಂಬರು ಮತ್ತು‌ ಪೇಂಟ್ ಉತ್ಪಾದನಾ ಘಟಕಗಳನ್ನು ಮುಚ್ಚಬೇಕು. ಕುಮಾರಸ್ವಾಮಿ, ಪಾರ್ವತಿ‌ ದೇಗುಲದ 2 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಬೇಕು. ತುಂಗಭದ್ರಾ ಮತ್ತು ಅಲಮಟ್ಟಿ ಜಲಾಶಯದ ನೀರನ್ನು ಜಿಂದಾಲ್ ಅಕ್ರಮವಾಗಿ ಬಳಸದಂತೆ ತಡೆಗಟ್ಟಬೇಕು ಎಂದು ಆಗ್ರಹಿಸಿದ್ದಾರೆ.
Body:ರೈತ ಸಂಘ, ಮಹಾತ್ಮ ಗಾಂಧಿ ವಿವಿಧೋದ್ದೇಶ ಸಹಕಾರಿ ಸಂಘ, ರೈತ ಕೃಷಿ ಕಾರ್ಮಿಕರ ಸಂಘ, ಚಾಗನೂರು- ಸಿರಿವಾರ ನೀರಾವರಿ ಭೂ ಹೋರಾಟ ಸಮಿತಿ ಹಾಗೂ ಇಸಿಪಿಎಲ್ ಕಾರ್ಖಾನೆ ವಿರೋಧಿ ಹೋರಾಟ ಸಮಿತಿಗಳ ಒಕ್ಕೂಟವು ಈ ಪಾದಯಾತ್ರೆಗೆ ಬೆಂಬಲ ನೀಡಿದ್ದವು.
ಜಿಂದಾಲ್‌ಗೆ ಭೂಮಿ ಮಾರಾಟ ಮಾಡಬಾರದು ಎಂದು ಆಗ್ರಹಿಸಿ‌ ಹಗಲು–ರಾತ್ರಿ ಧರಣಿ ನಡೆಸಿದ್ದ‌ ಬಿಜೆಪಿಯೇ ಈಗ ಅಧಿಕಾರದಲ್ಲಿ ಇರುವುದರಿಂದ ‌ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬಹುದು ಎಂಬ ನಿರೀಕ್ಷೆಯಿದೆ. ಮುಖ್ಯಮಂತ್ರಿ ಯಡಿಯೂರಪ್ಪನವ್ರು ತಮ್ಮ ನಿಲುವನ್ನು ಕೂಡಲೇ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ರೈತ ಮುಖಂಡರಾದ ಚಾಗನೂರು ಮಲ್ಲಿಕಾರ್ಜುನರೆಡ್ಡಿ, ಶ್ರೀಶೈಲ ಆಲ್ದಳ್ಳಿ, ಶಿವುಕುಮಾರ, ಮಾಧವರೆಡ್ಡಿ ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_5_JANA_SANGRAMA_PADAYATRE_7203310

KN_BLY_5b_JANA_SANGRAMA_PADAYATRE_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.