ಬಳ್ಳಾರಿ: ಗಂಡು-ಹೆಣ್ಣು ಒಂದೇ ನಾಣ್ಯದ ಎರಡು ಮುಖಗಳು. ಹೆಣ್ಣು ಭ್ರೂಣ ಹತ್ಯೆಯನ್ನು ಮಾಡುವವರು ಅಪರಾಧಿಗಳು. ಹೆಣ್ಣು ಭ್ರೂಣ ಹತ್ಯೆ ಮಾಡಬಾರದು ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಆರ್.ವಿಜಯಲಕ್ಷ್ಮಿ ಹೇಳಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು,ಗಂಡು-ಹೆಣ್ಣು ಒಂದೇ ನಾಣ್ಯದ ಎರಡು ಮುಖಗಳು. ಹೆಣ್ಣು ಭ್ರೂಣ ಹತ್ಯೆಯನ್ನು ಮಾಡುವವರು ಅಪರಾಧಿಗಳು ಎಂದರು.
ನಂತರ ಜಿಲ್ಲಾ ವೈದ್ಯಾಧಿಕಾರಿ ಮಾತನಾಡಿ, ಭಾರತದಲ್ಲಿ 1991ನೇ ಸಾಲಿನಲ್ಲಿ 1000 ಪುರುಷರಿಗೆ 972 ಮಹಿಳೆಯರು ಇದ್ದು, 2001ರಲ್ಲಿ ಮಹಿಳೆಯರ ಪ್ರಮಾಣ 942ಕ್ಕೆ ಇಳಿದಿದೆ. ಕರ್ನಾಟಕದಲ್ಲಿ ಮಹಿಳೆಯರ ಪ್ರಮಾಣ 963ಕ್ಕೆ ಇಳಿದಿದೆ. ಅದರಲ್ಲೂ 6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ಲಿಂಗಾನುಪಾತ ಜಾಸ್ತಿಯಾಗಿದೆ ಎಂದರು.