ಹೊಸಪೇಟೆ: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಎಂ.ಬಿ.ಅಯ್ಯನಹಳ್ಳಿ ಬಳಿ ಆಕಸ್ಮಿಕವಾಗಿ ಬೆಂಕಿ ಹೊತ್ತಿದ ಪರಿಣಾಮ ಲಾರಿ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಓದಿ: ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಐವರು ಆರೋಪಿಗಳ ಬಂಧನ
ಗೂಡ್ಸ್ ಹೊತ್ತು ಸಾಗುತ್ತಿದ್ದ ಲಾರಿಯ ಬಲಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತತಕ್ಷಣವೇ ಬೆಂಕಿಯ ಕೆನ್ನಾಲಿಗೆ ಹಬ್ಬಿ ಲಾರಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಸಹ ಉಂಟಾಯಿತು.