ETV Bharat / state

ಬಸ್ ​- ಲಾರಿ ಮುಖಾಮುಖಿ ಡಿಕ್ಕಿ: 5 ಮಂದಿ ಸ್ಥಿತಿ ಗಂಭೀರ

author img

By

Published : Jun 16, 2022, 10:28 AM IST

ಹೊಸಪೇಟೆಯಿಂದ ಬಳ್ಳಾರಿ ಮಾರ್ಗವಾಗಿ ಹೊರಟ್ಟಿದ್ದ ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ 5 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಹೊಸಪೇಟೆಯ ತಾಲೂಕು ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಬಸ್​-ಲಾರಿ ಮುಖಾಮುಖಿ ಡಿಕ್ಕಿ
ಬಸ್​-ಲಾರಿ ಮುಖಾಮುಖಿ ಡಿಕ್ಕಿ

ವಿಜಯನಗರ: ಹೊಸಪೇಟೆ ತಾಲೂಕಿನ ಧರ್ಮಸಾಗರದ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಲಾರಿ ಹಾಗೂ ಸಾರಿಗೆ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೊಸಪೇಟೆಯಿಂದ ಬಳ್ಳಾರಿ ಮಾರ್ಗವಾಗಿ ಹೊರಟ್ಟಿದ್ದ ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿದ್ದು, ಚಾಲಕರ ಅತಿಯಾದ ವೇಗವೇ ಘಟನೆಗೆ ಕಾರಣ ಎನ್ನಲಾಗಿದೆ. ಬಸ್​ನಲ್ಲಿದ್ದ 5 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಹೊಸಪೇಟೆಯ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನುಳಿದ ಕೆಲ ಪ್ರಯಾಣಿಕರಿಗೂ ಚಿಕ್ಕ ಪುಟ್ಟ ಗಾಯಗಳಿವೆ. ಗಾಯಗೊಂಡವರಲ್ಲಿ ಬಹುತೇಕ ಕಾಲೇಜು ವಿದ್ಯಾರ್ಥಿಗಳಾಗಿದ್ದು, ಹೊಸಪೇಟೆ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಾಸನ: ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದ ಆರೋಪಿಗಳು ಕೊನೆಗೂ ಅರೆಸ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.