ETV Bharat / state

ಬಳ್ಳಾರಿ: ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ - Forced to set up the Golla Development Corporation

ನಮ್ಮಲ್ಲಿನ ಎಲ್ಲಾ ಉಪಜಾತಿಗಳನ್ನು ನಿರ್ಲಕ್ಷ್ಯ ಮಾಡಿ ಕೇವಲ ಕಾಡುಗೊಲ್ಲ ಹೆಸರಿನಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ನೋವನ್ನುಂಟು ಮಾಡಿದೆ ಎಂದು ಜಿಲ್ಲಾ ಗೊಲ್ಲರ ಸಂಘದ ಕಾರ್ಯದರ್ಶಿ ಕೆ.ಇ ಚಿದಾನಂದಪ್ಪ ತಿಳಿಸಿದ್ದಾರೆ.

Forced to set up the Golla Development Corporation
ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ
author img

By

Published : Oct 4, 2020, 2:54 PM IST

ಬಳ್ಳಾರಿ: ರಾಜ್ಯ ಸರ್ಕಾರ ಸ್ಥಾಪಿಸಿರುವ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ವಿರೋಧ ವ್ಯಕ್ತಪಡಿಸುತ್ತ, ಅದನ್ನು ಗೊಲ್ಲರ ಅಭಿವೃದ್ಧಿ ನಿಗಮ ಎಂದು ಮರು ಸ್ಥಾಪಿಸುವಂತೆ ಒತ್ತಾಯಿಸಿ ಜಿಲ್ಲಾ ಗೊಲ್ಲರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾತನಾಡಿದ ಜಿಲ್ಲಾ ಗೊಲ್ಲರ ಸಂಘದ ಕಾರ್ಯದರ್ಶಿ ಕೆ.ಇ ಚಿದಾನಂದಪ್ಪ, ರಾಜ್ಯದಲ್ಲಿ ವಿಶ್ವಕರ್ಮ, ಉಪ್ಪಾರ ಗಂಗಾಮತ, ಒಕ್ಕಲಿಗ, ವೀರಶೈವ ಸೇರಿದಂತೆ ನಮ್ಮೆಲ್ಲಾ ಹಲವಾರು ಉಪಜಾತಿಗಳಾದ ಕಾಡುಗೊಲ್ಲ, ಕೃಷ್ಣಗೊಲ್ಲ, ಹರಿವಿಗೊಲ್ಲ, ಹಾವುಗೊಲ್ಲ ಮೊದಲಾದ ಹೆಸರುಗಳಿದ್ದರೂ ಒಟ್ಟಾರೆಯಾಗಿ ಯಾದವ ಸಮೂಹ ಎಂದು ಕರೆಯಲಾಗುತ್ತದೆ. ನಮ್ಮಲ್ಲಿನ ಎಲ್ಲಾ ಉಪಜಾತಿಗಳನ್ನು ನಿರ್ಲಕ್ಷ್ಯ ಮಾಡಿ ಕೇವಲ ಕಾಡುಗೊಲ್ಲ ಹೆಸರಿನಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ನೋವನ್ನುಂಟು ಮಾಡಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಅವರು, ಈ ರೀತಿ ಉಪ ಪಂಗಡಗಳ ಹೆಸರಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸುತ್ತಾ ಹೋದರೆ, ರಾಜ್ಯದಲ್ಲಿ ನೂರಾರು ನಿಗಮ ಸ್ಥಾಪಿಸಬೇಕಾಗುತ್ತದೆ ಮತ್ತು ರಾಜಕಾರಣಕ್ಕಾಗಿ ಸಮಾಜವನ್ನು ಒಡೆಯುವ ಪ್ರಯತ್ನ ಸರ್ಕಾರದಿಂದ ನಡೆಯುತ್ತಿದ್ದು ಇದು ಸರಿಯಾದ ಕ್ರಮವಲ್ಲ ಎಂದರು.

ಶಾಸಕಿ ಪೂರ್ಣಿಮ ಮತ್ತು ಯಾದವ ಸಮಾಜದ ರಾಜ್ಯಾಧ್ಯಕ್ಷ ಶ್ರೀನಿವಾಸ ಅವರ ಸಲಹೆ ಕಡೆಗಣಿಸಿ ಕಾಡಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದನ್ನು ನಮ್ಮ ಸಂಘ ಖಂಡಿಸುತ್ತದೆ. ತಕ್ಷಣ ಕಾಡುಗೊಲ್ಲ ಅಭಿವೃದ್ಧಿ ನಿಗಮ ರದ್ದು ಮಾಡಿ ಗೊಲ್ಲ ಅಭಿವೃದ್ಧಿ ನಿಗಮ ಎಂದು ಆದೇಶ ಹೊರಡಿಸಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.