ETV Bharat / state

ಮೆಣಸಿನಕಾಯಿ ಬೆಳೆ ಕೈಹಿಡಿಯದೆ ಹೆಚ್ಚಾದ ಸಾಲದ ಉರಿ.. ನೇಣಿಗೆ ಕೊರಳೊಡ್ಡಿದ ಅನ್ನದಾತ!

ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನ್ನದಾತ ಬಲಿ
author img

By

Published : May 10, 2019, 10:29 AM IST

ಬಳ್ಳಾರಿ: ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನಲ್ಲಿ ನಡೆದಿದೆ.

ಜಿಲ್ಲೆಯ ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಜಯರಾಮ ರೆಡ್ಡಿ (35) ನೇಣಿಗೆ ಶರಣಾದ ವ್ಯಕ್ತಿಯೆಂದು ಗುರುತಿಸಲಾಗಿದೆ. ಕೋಳೂರು ಗ್ರಾಮದ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿರುವ ಬೇವಿನ ಮರಕ್ಕೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಮೃತ ಜಯರಾಮ ಕೋಳೂರು ಸಹಕಾರಿ ಸಂಘದಲ್ಲಿ ಸುಮಾರು1.35 ಲಕ್ಷ ರೂ. ಸಾಲ ಮಾಡಿದ್ದರು. ಮೂರು ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಸಮರ್ಪಕ ಮಳೆಯಿಲ್ಲದೇ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿತ್ತು. ಇದರಿಂದ ಮನನೊಂದು ರೈತ ಜಯರಾಮ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕುರುಗೋಡು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Intro:ಸಾಲಬಾಧೆ ತಾಳಲಾರದೆ: ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬಳ್ಳಾರಿ: ಸಾಲಬಾಧೆ ತಾಳಲಾರದೆ ರೈತನೊಬ್ಬ ಬೇವಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಜಿಲ್ಲೆಯ ಕುರುಗೋಡು ತಾಲೂಕಿನಲ್ಲಿಂದು ನಡೆದಿದೆ.
ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಜಯರಾಮ ರೆಡ್ಡಿ (35) ಎಂಬುವವರೇ ನೇಣಿಗೆ ಶರಣಾದ ವ್ಯಕ್ತಿಯೆಂದು ಗುರುತಿಸಲಾಗಿದೆ.
Body:ಕೋಳೂರು ಗ್ರಾಮದ ಸರ್ಕಾರಿ ಆಸ್ಪತ್ರೆಯ ಇಂಭಾಗದಲ್ಲಿರುವ ಬೇವಿನ ಮರಕ್ಕೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಕೋಳೂರು ಸಹಕಾರಿ ಸಂಘದಲ್ಲಿ ಅಂದಾಜು 1.35 ಲಕ್ಷ ರೂ.ಗಳ ಸಾಲ ಹೊಂದಿದ್ದರು. ಮೂರು ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಸಮರ್ಪಕ ಮಳೆಯಿಲ್ಲದೇ ಬೆಳೆ ಸಂಪೂರ್ಣ ವಾಗಿ ಒಣಗಿ ಹೋಗಿತ್ತು. ಅದಕ್ಕೆ ಮನನೊಂದ ಈ ರೈತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕುರುಗೋಡು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_03_08_KOLURU_FARMER_SUICIDE_7203310

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.