ವಿಜಯನಗರ: ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್ ಟಿ ಬೊಮ್ಮಣ್ಣ ವಿಧಿವಶರಾಗಿದ್ದಾರೆ. 79 ವರ್ಷದ ಎನ್ ಟಿ ಬೊಮ್ಮಣ್ಣ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ನಿಧನರಾಗಿದ್ದಾರೆ.
ಎನ್ ಟಿ ಬೊಮ್ಮಣ್ಣ 1985ರಿಂದ 1994 ರವರೆಗೆ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. ಎನ್ ಟಿ ಬೊಮ್ಮಣ್ಣ ಅವರು ಪತ್ನಿ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಎನ್ ಟಿ ಬೊಮ್ಮಣ್ಣ ಎರಡು ಬಾರಿ ಕೂಡ್ಲಿಗಿ ಕ್ಷೇತ್ರದಿಂದ ಕಣಕ್ಕಿಳಿದು, ಗೆಲುವು ಸಾಧಿಸಿದ್ದರು. 2018ರ ಚುನಾವಣೆಯಲ್ಲಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು, 39,272 ಮತಗಳನ್ನು ಪಡೆದು ಸೋಲು ಕಂಡಿದ್ದರು. 60ರ ದಶಕದಲ್ಲಿ ರಾಜಕೀಯಕ್ಕೆ ಧುಮುಕಿದ್ದ ಅವರು, ತಾಲೂಕು ಬೋರ್ಡ್ ಅಧ್ಯಕ್ಷರಾಗಿ ನಂತರ ಶಾಸಕರಾಗಿದ್ದರು. ಇಂದು ಕೂಡ್ಲಿಗಿ ತಾಲೂಕಿನ ಸ್ವಗ್ರಾಮದ ನರಸಿಂಹ ಗಿರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ಆಸ್ಕರ್ ರೇಸ್‌ನಲ್ಲಿರುವ ಚೆಲ್ಲೋ ಶೋ ಚಿತ್ರದ ಬಾಲ ಪ್ರತಿಭೆ ರಾಹುಲ್ ವಿಧಿವಶ