ಹೊಸಪೇಟೆ: ಸಾಲ ಸೌಲಭ್ಯಗಳನ್ನು ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ದೋಚಿದ್ದಾರೆ ಎಂದು ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಯಮನೂರ ಗುರಿಕಾರ ವಿರುದ್ಧ ಹಸೀನಾ ಬಾನು ಎಂಬುವವರು ದೂರು ನೀಡಿದ್ದು, ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನಶೀಲಾ ಯೋಜನೆಯಡಿ ಸಾಲ ಕೊಡಿಸುವುದಾಗಿ ವಂಚಿಸಿದ್ದಾರೆಂದು ಆರೋಪಿಸಿದ್ದಾರೆ.
ಒಂದು ಅರ್ಜಿಗೆ ಜನರಿಂದ 3 ಸಾವಿರ ರೂ. ಪಡೆದುಕೊಂಡಿದ್ದಾರೆ. ಇದೇ ರೀತಿಯಾಗಿ 471 ಜನರಿಂದ ಒಟ್ಟು 14,13,000 ರೂ. ಪಡೆದುಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆ ಯಮನೂರ ಅವರ ವಿರುದ್ಧ ಸೂಕ್ತ ಕ್ರಮಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.