ಬಳ್ಳಾರಿ: ಅಪಘಾತದಲ್ಲಿ ಕಾಲು, ಕೈ ಕಳೆದುಕೊಂಡವರಿಗೆ ಮತ್ತು ವಿಶೇಷ ಚೇತನರು, ಬುದ್ಧಿಮಾಂದ್ಯರು ಹಾಗು ಅಂಧರಿಗೆ 250ಕ್ಕೂ ಅಧಿಕ ಸಾಧನಾ ಸಲಕರಣೆಗಳನ್ನು ವಿತರಿಸಲಾಯಿತು.
ಇಲ್ಲಿನ ವಿಮ್ಸ್ ಆಸ್ಪತ್ರೆ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಆವರಣದಲ್ಲಿ ಕೊಲ್ಕತ್ತಾ ಕೋಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಜೈ ಗುರುದೇವ ಚಾರಿಟೇಬಲ್ ಟ್ರಸ್ಟ್, ವಿಶ್ವಭಾರತಿ ಕಲಾನಿಕೇತನ ಮತ್ತು ಶಿಕ್ಷಣ ಸಂಸ್ಥೆ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆದಿದೆ. ಈ ವೇಳೆ ಉಚಿತ ಕೃತಕ ಕೈ-ಕಾಲು ಜೋಡಣೆ ಶಿಬಿರ
ಹಾಗೂ ತ್ರೈಸಿಕಲ್ ವಿತರಣೆ ನಡೆಯಿತು.
ಜಿಲ್ಲೆ, ತಾಲೂಕು, ಹೋಬಳಿ ಮತ್ತು ನೆರೆಹೊರೆಯ ಜಿಲ್ಲೆಗಳಿಂದ 2 ಸಾವಿರಕ್ಕೂ ಅಧಿಕ ಫಲಾನುಭವಿಗಳು ಪಾಲ್ಗೊಂಡಿದ್ದರು.