ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಎಂ.ಗೋವಿಂದರಾಜಲು ಅವರು ಬಾಲ್ಯದಲ್ಲಿ ಬಹಳ ಕಷ್ಟಪಟ್ಟು ಬಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಸಾವಿರರು ಸಾರ್ವಜನಿಕರಿಗೆ ಉಚಿತ ಊಟ ವಿತರಣೆ ಮಾಡುತ್ತಿರುವುದು ಸಂತೋಷದ ವಿಚಾರ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ತಿಳಿಸಿದರು.
ಈಟಿವಿ ಭಾರತದ ಜೊತೆ ಮಾತನಾಡಿದ ಸೋಮಶೇಖರ್ ರೆಡ್ಡಿ, ಗೋವಿಂದರಾಜಲು ಅವರಿಗೆ ಬಡವರ ಕಷ್ಟಗಳು ಏನು ಎನ್ನುವ ವಿಚಾರ ಗೊತ್ತು. ಲಾಕ್ ಡೌನ್ ಆದಾಗಿನಿಂದ ಹಿಡಿದು ಇಲ್ಲಿಯವರೆಗೆ ಪ್ರತಿನಿತ್ಯ ಸಾವಿರಾರು ಸಾರ್ವಜನಿಕರಿಗೆ ಉಚಿತ ಊಟ ವಿತರಣೆ ಮಾಡುತ್ತಿರುವುದು ಸಂತೋಷದ ವಿಚಾರ ಎಂದರು.