ETV Bharat / state

ಸಚಿವ ಸ್ಥಾನ‌ ಸಿಗದಿರುವುದಕ್ಕೆ ಬೇಸರವಿಲ್ಲ: ಕರುಣಾಕರ ರೆಡ್ಡಿ ಸ್ಪಷ್ಟನೆ - Gali karunakara reddy reaction about missing ministerial position

ಶಾಸಕ ಬಸವರಾಜ ಪಾಟೀಲ ಯತ್ನಾಳ್​ ಹಾಗೂ ಎಂ.ಪಿ. ರೇಣುಕಾಚಾರ್ಯ ಅವರು ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದು ಅವರ ವೈಯಕ್ತಿಕ ವಿಚಾರ. ಆದರೆ ನನಗೆ ಸಚಿವ ಸ್ಥಾನ ದೊರೆಯದಿರುವುದಕ್ಕೆ ಬೇಸರವಿಲ್ಲ ಎಂದು ಶಾಸಕ ಗಾಲಿ ಕರುಣಾಕರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಕರುಣಾಕರ ರೆಡ್ಡಿ
ಕರುಣಾಕರ ರೆಡ್ಡಿ
author img

By

Published : Jan 16, 2021, 3:27 PM IST

ಬಳ್ಳಾರಿ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ, ಆದರೆ ಸಚಿವ ಸ್ಥಾನ ನೀಡದಿರುವುದಕ್ಕೆ ಬೇಸರವಿಲ್ಲ ಎಂದು ಹರಪನಹಳ್ಳಿ ಶಾಸಕ ಗಾಲಿ ಕರುಣಾಕರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಕರುಣಾಕರ ರೆಡ್ಡಿ ಅಭಿಪ್ರಾಯ

ಬಳ್ಳಾರಿಯ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಪ್ರಾದೇಶಿಕ ಆರೋಗ್ಯ ಪರೀಕ್ಷೆ ಕೇಂದ್ರದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಲ್ಲಿ ಕೆಲವರಿಗೆ ಅಸಮಾಧಾನ ಉಂಟಾಗುವುದು ಸಹಜ. ಆದರೆ ಎಲ್ಲರನ್ನೂ ಸಮಾಧಾನ ಪಡಿಸಲು ಯಾರಿಂದಲು ಸಾಧ್ಯವಿಲ್ಲ. ನನಗೆ ಸಚಿವ ಸ್ಥಾನ ದೊರೆಯದಿರುವುದಕ್ಕೆ ಬೇಸರವಿಲ್ಲ ಎಂದು ಹೇಳಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಜಿಲ್ಲೆಯ ಹೊಸಪೇಟೆಯಲ್ಲಿ‌ ಜನಸೇವಕ​ ಸಮಾವೇಶ ಆಯೋಜಿಸಲಾಗಿತ್ತು. ಆದರೆ, ನಾನು ಆ ಸಮಾವೇಶದಲ್ಲಿ ಭಾಗಿಯಾಗಿರಲಿಲ್ಲ. ಅದನ್ನೇ ತಪ್ಪಾಗಿ ಅರ್ಥೈಸಿಕೊಂಡು ಕೆಲ ಮಾಧ್ಯಮಗಳು ಸುದ್ದಿ ಬಿತ್ತರಿಸಿದ್ದವು. ಸುಖಾಸುಮ್ಮನೆ ಈ ರೀತಿ ಸುದ್ದಿ ಬಿತ್ತರಿಸುವುದು‌ ತರವಲ್ಲ ಎಂದು ಶಾಸಕರು ಹೇಳಿದರು.

ಪಕ್ಷ ವಿರೋಧಿ ಹೇಳಿಕೆ ವೈಯಕ್ತಿಕ ವಿಚಾರ:

ಇನ್ನು ಶಾಸಕ ಬಸವರಾಜ ಪಾಟೀಲ ಯತ್ನಾಳ್​ ಹಾಗೂ ಎಂ.ಪಿ. ರೇಣುಕಾಚಾರ್ಯ ಅವರು ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದು ಅವರ ವೈಯಕ್ತಿಕ ವಿಚಾರ. ಅದಕ್ಕೂ ನನಗೂ ಸಂಬಂಧವಿಲ್ಲ. ನಾನಂತೂ ಕಳೆದ 26 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ‌ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.