ಬಳ್ಳಾರಿ : ನಗರದ ಹೊರ ವಲಯದಲ್ಲಿನ ಮಟ್ಕಾ ಮತ್ತು ಜೂಜು ಅಡ್ಡೆಯ ಮೇಲೆ ಮೇಲೆ ಪ್ರತ್ಯೇಕ ದಾಳಿ ನಡೆಸಿದ ಗ್ರಾಮೀಣ ಠಾಣೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಜೂಜಿನಲ್ಲಿ ತೊಡಗಿದ್ದ 8 ಮಂದಿಯನ್ನು ಬಂಧಿಸಿದ ಪೊಲೀಸರು, ಸುಮಾರು 12,800 ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದು ಪ್ರಕರಣವು ನಗರದ ಹೊರವಲಯದ ಮುಂಡ್ರಿಗಿ ಪ್ರದೇಶದಲ್ಲಿ ನಡೆದಿದ್ದು, ಮಟ್ಕಾ ಆಡುತ್ತಿದ್ದ ಇಬ್ಬರನ್ನು ಬಂಧಿಸಿ 1,100 ರೂ. ನಗದು ಜಪ್ತಿ ಮಾಡಿಕೊಂಡಿದ್ದಾರೆ.