ಬಳ್ಳಾರಿ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಟ್ಕಾ, ಕೋಳಿ ಜೂಜಾಟದಲ್ಲಿ ತೊಡಗಿದ್ದ ಒಟ್ಟು ಹನ್ನೊಂದು ಜನರು ಪೊಲೀಸರ ಅತಿಥಿಯಾಗಿದ್ದಾರೆ
ಬಳ್ಳಾರಿ ತಾಲೂಕಿನ ಲಿಂಗದಶವನಹಳ್ಳಿಯಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಒರ್ವ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 1,170 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಪರಮದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಅದೇ ರೀತಿ ತಾಲೂಕಿನ ಕೃಷ್ಣಾನಗರ ಕ್ಯಾಂಪ್ನಲ್ಲಿ ಕೋಳಿ ಜೂಜಾಟದಲ್ಲಿ ತೊಡಗಿದ್ದ 10 ಜನರನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸರು, 5 ಕೋಳಿಗಳು ಮತ್ತು 12,600 ನಗದನ್ನು ವಶಪಡಿಸಿಕೊಂಡಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ ಹನುಮಂತಪ್ಪ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.