ETV Bharat / state

ಬಳ್ಳಾರಿ: 1.80 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ - Ballary road work

2019-20ನೇ ಸಾಲಿನ ಅಪೆಂಡಿಕ್ಸ್-ಇ ಯೋಜನೆ ಅಡಿಯಲ್ಲಿ ಮಂಜೂರಾದ 1.80 ಕೋಟಿ ರೂ.ಗಳ ಕಾಮಗಾರಿಗೆ ಬುಧವಾರದಂದು ಕಮಲಾಪುರದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.

Gave drive to Ballary road developmental work

author img

By

Published : Aug 5, 2020, 9:24 PM IST

ಬಳ್ಳಾರಿ/ಹೊಸಪೇಟೆ: ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ರವರ ಸೂಚನೆ ಮೇರೆಗೆ 2019-20ನೇ ಸಾಲಿನ ಅಪೆಂಡಿಕ್ಸ್-ಇ ಯೋಜನೆ ಅಡಿಯಲ್ಲಿ ಮಂಜೂರಾದ 1.80 ಕೋಟಿ ರೂ.ಗಳ ಕಾಮಗಾರಿಗೆ ಬುಧವಾರದಂದು ಕಮಲಾಪುರದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.

ಲೋಕೋಪಯೋಗಿ ಇಲಾಖೆಯ 2019-20ನೇ ಸಾಲಿನ ಅಪೆಂಡಿಕ್ಸ್-ಇ ಯೋಜನೆಯ ಅಡಿಯಲ್ಲಿ ಮಂಜೂರಾದ 1.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಂಡೂರು-ಸಿರುಗುಪ್ಪ ರಾಜ್ಯ ಹೆದ್ದಾರಿ-49ರ ಕಿ.ಮೀ.38.80ರಿಂದ 41.00 ರವರೆಗಿನ (ಕಮಲಾಪುರದ ಶಾದಿಮಹಲ್‍ನಿಂದ ಭುವನೇಶ್ವರ ಹೋಟೆಲ್ ಗೆಟ್‍ವರೆಗೆ) ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ದೊರೆಯಿತು.

ಈ ಸಂದರ್ಭದಲ್ಲಿ ಮಾಜಿ ಹುಡಾ ಅಧ್ಯಕ್ಷರಾದ ಐಯಾಳಿ ತಿಮ್ಮಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್ ಸೇರಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಕಮಲಾಪುರ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಕಮಲಾಪುರದ ಮುಖಂಡರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.