ಬಳ್ಳಾರಿ: ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಸಿರುಗುಪ್ಪ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ಕೆರೆಯಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ಶ್ರೀದೇವಿ(12), ಮಹೇಶ್ವರಿ(13) ಎಂದು ಗುರುತಿಸಲಾಗಿದೆ.
ಬಾಲಕಿಯರು ಸ್ನೇಹಿತರೊಡನೆ ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದ ಸಂದರ್ಭ ಓರ್ವ ಬಾಲಕಿ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಈಕೆಯನ್ನು ರಕ್ಷಿಸಲು ಹೋದ ಎಲ್ಲರೂ ನೀರುಪಾಲಾಗಿದ್ದಾರೆ. ಆದರೆ ಅದೃಷ್ಟವಶಾತ್ ಅಲ್ಲಿಯೇ ಹತ್ತಿರದಲ್ಲಿದ್ದ ಓರ್ವ ವ್ಯಕ್ತಿ ಬಂದು ಮೂವರನ್ನು ಕಾಪಾಡಿದ್ದು, ಆದರೆ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಗ್ರಾಮಸ್ಥರು ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಬಳಿಕ ಹಚ್ಚೋಳಿ ಪೊಲೀಸ್ ಠಾಣೆಯ ಪಿ ಎಸ್ ಐ ಅನ್ನಪೂರ್ಣ, ಎ ಎಸ್ ಐ ಕುಮಾರಸ್ವಾಮಿ ಸೇರಿದಂತೆ ಠಾಣೆಯ ಅಧಿಕಾರಿಗಳು ಹಾಗೂ ಸಿರುಗುಪ್ಪ ನಗರದ ಸಿಪಿಐ ಯಶವಂತ ಬಿಸ್ನಳ್ಳಿ ಮತ್ತು ತಾಲ್ಲೂಕು ದಂಡಾಧಿಕಾರಿಗಳಾದ ತಹಶೀಲ್ದಾರ್ ಎನ್ ಆರ್ ಮಂಜುನಾಥ ಸ್ವಾಮಿ, ಕಂದಾಯ ಅಧಿಕಾರಿ ಮಂಜುನಾಥ ಹಾಗೂ ಇನ್ನಿತರ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಓದಿ :ಕಲ್ಚರಲ್ ಕಾರ್ಯಕ್ರಮದಲ್ಲಿ ಕೈ ತಾಗಿದ ಆರೋಪ- ಸೀನಿಯರ್ ವಿದ್ಯಾರ್ಥಿಗಳಿಂದ ಜ್ಯೂನಿಯರ್ಸ್ಗೆ ಹಲ್ಲೆ- 8 ಮಂದಿ ಬಂಧನ