ETV Bharat / state

ಹಂಪಿ ಕನ್ನಡ ವಿವಿಗೆ 3.52 ಕೋಟಿ ರೂ. ಬಿಡುಗಡೆ - ಹಂಪಿ ಕನ್ನಡ ವಿಶ್ವ ವಿದ್ಯಾಲಯ ಲೇಟೆಸ್ಟ್ ನ್ಯೂಸ್

ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ಕಾರ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವೇತನ ನೀಡುವ ಸಲುವಾಗಿ ಸರ್ಕಾರ 3.52 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಹಂಪಿ ಕನ್ನಡ ವಿಶ್ವ ವಿದ್ಯಾಲಯ
Hampi Kannada University
author img

By

Published : Mar 28, 2021, 11:49 AM IST

ಹೊಸಪೇಟೆ: ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನಕ್ಕಾಗಿ ಸರ್ಕಾರ 3.52 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

copy
ಸರ್ಕಾರ ಹಂಪಿ ವಿವಿಗೆ ಅನುದಾನ ಬಿಡುಗಡೆ ಮಾಡಿರುವ ಸಂಬಂಧ ಹೊರಡಿಸಿರುವ ಆದೇಶದ ಪ್ರತಿ

ಕಳೆದ ಹತ್ತು ತಿಂಗಳಿಂದ ವೇತನವಿಲ್ಲದೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದು, ಸಿಬ್ಬಂದಿಯ ಸಂಕಷ್ಟಕ್ಕೆ ಸ್ಪಂದಿಸುವಂತೆ ಕನ್ನಡ ವಿವಿ ಕುಲಪತಿ ಡಾ.ಸ.ಚಿ. ರಮೇಶ್​​ ಅವರು ಆರು ಕೋಟಿ ರೂ. ಬಿಡುಗಡೆ ಮಾಡುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಸಂಬಂಧ ಸರ್ಕಾರ ಮೊದಲ ಹಂತವಾಗಿ ಮೂರೂವರೆ ಕೋಟಿ ರೂ. ಅನದಾನ ಬಿಡುಗಡೆ ಮಾಡಿದೆ.

ಜಿಲ್ಲೆಯ ಖನಿಜ ನಿಧಿಯಿಂದ ಕನ್ನಡ ವಿವಿಯ ಅಭಿವೃದ್ಧಿಗೆ 10 ಕೋಟಿ ರೂ. ಬಿಡುಗಡೆ ಮಾಡುವಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್​​ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದು, ಸಚಿವರು ನೀಡಿದ ಭರವಸೆ ಈಡೇರಿಸಿಲ್ಲ ಎನ್ನಲಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.