ಬಳ್ಳಾರಿ: ಸೇವಾ ಭದ್ರತೆ ಒದಗಿಸಿ, ಬಾಕಿ ಇರುವ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ವತಿಯಿಂದ ಬಳ್ಳಾರಿ ನಗರದ ಶಾಸಕ ಜಿ. ಸೋಮಶೇಖರ್ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಲಾಯಿತು.
ನಗರದ ಹವಂಬಾವಿ ಪ್ರದೇಶದ ತಮ್ಮ ಮನೆಯಲ್ಲಿ ಅತಿಥಿ ಉಪನ್ಯಾಸಕರ ನಿಯೋಗದೊಂದಿಗೆ ಮಾತನಾಡಿದ ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ಅವರ ಸಮಸ್ಯೆಗಳನ್ನು ಆಲಿಸಿದರು. ನಂತರ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರಿಗೆ ಪೋನ್ ಮಾಡಿ ಅತಿಥಿ ಉಪನ್ಯಾಸಕರ ಸೇವಾಭದ್ರತೆ ಖಾಯಂಗೊಳಿಸುವ ಹಾಗೂ ಸೇವೆಯಲ್ಲಿ ಮುಂದುವರೆಸುವ ಕುರಿತು ಮಾತನಾಡಿದರು.
![guest lecturers meet mla somashekhar reddy](https://etvbharatimages.akamaized.net/etvbharat/prod-images/kn-01-bly-270820-guest-leturer-news-ka10007_27082020174104_2708f_1598530264_577.jpg)
ಈ ಕೂಡಲೇ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಕಳುಹಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಮುಂದಿನ ಅಧೀವೇಶನದಲ್ಲಿ ಅತಿಥಿ ಉಪನ್ಯಾಸಕರ ಸೇವಾಭದ್ರತೆಯ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.
ಈ ಸಮಯದಲ್ಲಿ ಹೋರಾಟ ಸಮಿತಿಯ ಜಿಲ್ಲಾ ಸಮಿತಿಯ ಜಗದೀಶ್ ನೇಮಕಲ್ಲು, ಎರ್ರಿಸ್ವಾಮಿ ಹೆಚ್ ಹಾಗೂ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.
![guest lecturers meet mla somashekhar reddy](https://etvbharatimages.akamaized.net/etvbharat/prod-images/kn-01-bly-270820-guest-leturer-news-ka10007_27082020174104_2708f_1598530264_820.jpg)
ಅತಿಥಿ ಉಪನ್ಯಾಸಕರ ಬೇಡಿಕೆಗಳು:
- ಸೇವಾ ಭದ್ರತೆ ಒದಗಿಸಿ ಮತ್ತು ಯಾವುದೇ ಕಾರಣಕ್ಕೂ ಸೇವೆಯಿಂದ ಕೈಬಿಡಬಾರದು.
- ಬಾಕಿ ಇರುವ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು.
- ರಜಾ ಅವಧಿಯನ್ನು ಕೆಲಸದ ಅವಧಿಯೆಂದು ಪರಿಗಣಿಸಬೇಕು.