ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಅವರು ತೋಳು ತಟ್ಟಿ ಬಾ ಲೇ ಮಗನೇ ಎಂದು ಎದುರಾಳಿಗಳಿಗೆ ಅವಾಜ್ ಹಾಕುವ ವಿಡಿಯೋ ತುಣುಕೊಂದು ವೈರಲ್ ಆಗಿದೆ.
ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಶಾಸಕರ ಈ ವರ್ತನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ನಿನ್ನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಪ್ರಕ್ರಿಯೆ ನಡೆದಿತ್ತು. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೆಲಕಾಲ ನೂಕಾಟ-ತಳ್ಳಾಟ ಏರ್ಪಟ್ಟಿತ್ತು. ಅದನ್ನ ನಿಯಂತ್ರಿಸಲು ಹಗರಿಬೊಮ್ಮನಹಳ್ಳಿ ಪೊಲೀಸರು ಹರಸಾಹಸ ಪಡುತ್ತಿದ್ದರು. ಈ ವೇಳೆ ಶಾಸಕರು ತೋಳು ತಟ್ಟಿ ಜಗಳಕ್ಕೆ ಮುಂದಾಗಿದ್ದ ವಿಡಿಯೋ ಇದಾಗಿದೆ ಎಂದು ಹೇಳಲಾಗ್ತಿದೆ.